ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಆರ್ಟ್ ಆಫ್ ಲೀವಿಂಗ್ ಭೂ ಹಗರಣದ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ ; ಜು.17ರಿಂದ ಧರಣಿ ಸತ್ಯಾಗ್ರಹ

July 12, 2026
Share on WhatsappShare on FacebookShare on Twitter

ಬೆಂಗಳೂರು : ನಗರದ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲೀವಿಂಗ್ ಆಶ್ರಮದ ವಿರುದ್ಧ ಕೇಳಿಬಂದಿರುವ ಭೂ ಒತ್ತುವರಿ ಮಹಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಸಮತಾ ಸೈನಿಕ ದಳ ಸಿಡಿದೆದ್ದಿದೆ. ಇದೇ ವಿಚಾರವಾಗಿ ಈ ಹಿಂದೆ (ಮಾರ್ಚ್ 4) ಬೃಹತ್ ಪ್ರತಿಭಟನೆ ನಡೆಸಿ, ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸಮತಾ ಸೈನಿಕ ದಳ, “ಮೂಲ ಸರ್ಕಾರಿ ಸ್ವತ್ತನ್ನು ಸರ್ಕಾರದ ಸುಪರ್ದಿಗೆ ಪಡೆಯುವವರೆಗೂ ಹೋರಾಟ ನಿಲ್ಲುವುದಿಲ್ಲ” ಎಂದು ಎಚ್ಚರಿಕೆ ನೀಡಿದೆ. ಅಷ್ಟೇ ಅಲ್ಲದೆ, ಇದೇ ಜುಲೈ 17ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಲು ನಿರ್ಧರಿಸಿದ್ದು, ಸರ್ಕಾರ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ತೀವ್ರ ಹೋರಾಟ ನಡೆಸುವುದಾಗಿ ಘೋಷಿಸಿದೆ.

ಆರ್ಟ್ ಆಫ್ ಲೀವಿಂಗ್ ಆಶ್ರಮ ವಿರುದ್ಧದ ಗಂಭೀರ ಆರೋಪಗಳು

ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದ ಸರ್ವೆ ನಂ.46ರಲ್ಲಿ ಈ ಹಿಂದೆ 60 ಎಕರೆ ಸರ್ಕಾರಿ ಜಮೀನನ್ನು ಆರ್ಟ್ ಆಫ್ ಲೀವಿಂಗ್‌ನ ವೇದ ವಿಜ್ಞಾನ ಮಹಾವಿದ್ಯಾಪೀಠಕ್ಕೆ ಗುತ್ತಿಗೆ ನೀಡಲಾಗಿತ್ತು. ಗುತ್ತಿಗೆ ಅವಧಿ ಮುಗಿದ ಬಳಿಕ ಮರು ಗುತ್ತಿಗೆಗೆ ಅರ್ಜಿ ಸಲ್ಲಿಸಿರುವ ವೇಳೆ 60 ಎಕರೆಯ ಬದಲು ಕೇವಲ 33 ಎಕರೆಗೆ ಮಾತ್ರ ಅರ್ಜಿ ಸಲ್ಲಿಸಿರುವುದು ಅನುಮಾನಾಸ್ಪದವಾಗಿದೆ. ಉಳಿದ 27 ಎಕರೆ ಸರ್ಕಾರಿ ಜಮೀನಿನ ಕುರಿತು ಸಂಪೂರ್ಣ ಸರ್ವೆ ನಡೆಸಿ, ಅದರ ಸ್ಥಿತಿಯನ್ನು ಪರಿಶೀಲಿಸಿ ಸರ್ಕಾರದ ಸುಪರ್ಧಿಗೆ ಪಡೆಯಬೇಕು. ಅಲ್ಲದೆ ಗುತ್ತಿಗೆ ಆದೇಶದ ನಿಯಮಗಳನ್ನು ಉಲ್ಲಂಘಿಸಿ ವಾಣಿಜ್ಯ ಚಟುವಟಿಕೆ, ವಸತಿ ಸಂಕೀರ್ಣ ಹಾಗೂ ಕಲ್ಯಾಣ ಮಂಟಪ ನಿರ್ಮಿಸಿರುವುದರಿಂದ ಮರು ಗುತ್ತಿಗೆ ನೀಡಬಾರದು ಎಂದು ಸಮತಾ ಸೈನಿಕ ದಳ ಒತ್ತಾಯಿಸಿದೆ. ಈ ಸಂಬಂಧ ಹೈಕೋರ್ಟ್‌ನಲ್ಲಿ WP (PIL) No.14387/2023 ಪ್ರಕರಣ ವಿಚಾರಣೆಯಲ್ಲಿದ್ದು, ತಕರಾರು ಅರ್ಜಿಯನ್ನೂ ಸಲ್ಲಿಸಲಾಗಿದೆ. ಗುತ್ತಿಗೆ ಮಂಜೂರು ಮಾಡಲು ಕಡತ ಮಂಡಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಅಮಾನತುಗೊಳಿಸಬೇಕು ಎಂದು ಸಮತಾ ಸೈನಿಕ ದಳ ಆಗ್ರಹಿಸಿದೆ.

ಇನ್ನು ಕಗ್ಗಲೀಪುರ ಗ್ರಾಮದ ಸರ್ವೆ ನಂ.164ರಲ್ಲಿ ಸರ್ಕಾರಿ ರಾಜಕಾಲುವೆ ಒತ್ತುವರಿ ಮಾಡಿ, ಅದರ ಮೇಲೆಯೇ ಶ್ರೀ ಶ್ರೀ ಸುಮೇರು ರಿಯಾಲಿಟಿ ಪ್ರೈವೇಟ್ ಲಿಮಿಟೆಡ್‌ನ ಸೌಧಾಮಿನಿ ಅಪಾರ್ಟ್‌ಮೆಂಟ್ ಯೋಜನೆಯಡಿ 100ಕ್ಕೂ ಹೆಚ್ಚು ವಸತಿ ಸಮುಚ್ಚಯಗಳನ್ನು ನಿರ್ಮಿಸಿ ನೂರಾರು ಕೋಟಿ ರೂಪಾಯಿಗೆ ಫ್ಲಾಟ್‌ಗಳನ್ನು ಮಾರಾಟ ಮಾಡಲಾಗಿದೆ. ಈ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಿ, ರಾಜಕಾಲುವೆ ಒತ್ತುವರಿ ತೆರವುಗೊಳಿಸಿ ಹಾಗೂ ಸಂಬಂಧಪಟ್ಟವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಸಮತಾ ಸೈನಿಕ ದಳ ಆಗ್ರಹಿಸಿದೆ.

ಜೊತೆಗೆ ಕೆಂಗೇರಿ ಹೋಬಳಿಯ ಬಿ.ಎಂ. ಕಾವಲ್ ಸರ್ವೆ ನಂ.132ರಲ್ಲಿ ಸುಮಾರು 4 ಎಕರೆ ಮೂಲ ಸರ್ಕಾರಿ ಜಮೀನಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೋಟ್ಯಾಂತರ ರೂಪಾಯಿಗೆ ಮಾರಾಟ ಮಾಡಲಾಗಿದೆ ಎಂದು ಆರೋಪಿಸಿ, ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ಸರ್ಕಾರಿ ಜಮೀನನ್ನು ವಶಕ್ಕೆ ಪಡೆಯಬೇಕು ಎಂದು ಸಮತಾ ಸೈನಿಕ ದಳ ಒತ್ತಾಯಿಸಿದೆ.

ಹಾಗೆಯೇ ಆರ್ಟ್ ಆಫ್ ಲೀವಿಂಗ್ ಆಶ್ರಮದ ಸುತ್ತಮುತ್ತ ವಾಸಿಸುವ ದೀನದಲಿತರು ಹಾಗೂ ಹಿಂದುಳಿದ ವರ್ಗದ ಜನರ ಜಮೀನುಗಳನ್ನು ಸೆಕ್ಯೂರಿಟಿ ಗಾರ್ಡ್‌ಗಳ ಹೆಸರಿನಲ್ಲಿ ಗೂಂಡಾ ಪಡೆಗಳ ಮೂಲಕ ಆಶ್ರಮದವರು ತಮ್ಮ ನಿಯಂತ್ರಣದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಸಂಘಟನೆ ಆರೋಪಿಸಿದ್ದು, ಸರ್ಕಾರಿ ರಸ್ತೆಗಳಿಗೆ ಗೇಟ್ ಅಳವಡಿಸಿ ರೈತರು ತಮ್ಮ ಜಮೀನಿಗೆ ತೆರಳುವುದಕ್ಕೂ ಅವಕಾಶ ನೀಡುತ್ತಿಲ್ಲ ಎಂದು ದೂರಿದೆ. ಅಲ್ಲದೆ ಸರ್ಕಾರಿ ಸ್ವತ್ತುಗಳನ್ನು ಅನಧಿಕೃತವಾಗಿ ತಮ್ಮ ವಶದಲ್ಲಿಟ್ಟುಕೊಂಡಿರುವುದರ ಜೊತೆಗೆ ಅಗತ್ಯ ಅನುಮತಿಗಳಿಲ್ಲದೆ ಬಹುಮಹಡಿ ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಕೂಡಲೇ ಅವುಗಳನ್ನು ತೆರವುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಬೇಕು ಎಂದು ಆಗ್ರಹಿಸಿದೆ.

ಈ ಎಲ್ಲಾ ಆರೋಪಗಳ ಕುರಿತು ಸೂಕ್ತ ಕ್ರಮ ಕೈಗೊಂಡು ಭೂ ಒತ್ತುವರಿ ತೆರವುಗೊಳಿಸಿ ಮೂಲ ಸರ್ಕಾರಿ ಸ್ವತ್ತನ್ನು ಸರ್ಕಾರದ ಸುಪರ್ದಿಗೆ ಪಡೆಯುವವರೆಗೂ ಜುಲೈ 17ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಸಮತಾ ಸೈನಿಕ ದಳ ಘೋಷಿಸಿದೆ. ಈ ಕುರಿತು ರಾಜ್ಯ ಪೊಲೀಸ್ ಇಲಾಖೆ, ಕಂದಾಯ ಸಚಿವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಸಮತಾ ಸೈನಿಕ ದಳ ಅಧಿಕೃತ ಪತ್ರದ ಮೂಲಕ ಮಾಹಿತಿ ನೀಡಿದೆ.

ಇದನ್ನೂ ಓದಿ : ಬವೇರಿಯಾ ನಿಯೋಗದೊಂದಿಗೆ ಡಿಸಿಎಂ ಸಭೆ

Tags: bengaloreKarnataka News beat
SendShareTweet
Previous Post

ಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಅರೆಸ್ಟ್‌

Next Post

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಗಾನ ಕೋಗಿಲೆ ಎಸ್. ಜಾನಕಿ ಅಂತ್ಯಸಂಸ್ಕಾರ

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!
ಬೆಂಗಳೂರು

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

Next Post
ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಗಾನ ಕೋಗಿಲೆ ಎಸ್. ಜಾನಕಿ ಅಂತ್ಯಸಂಸ್ಕಾರ

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಗಾನ ಕೋಗಿಲೆ ಎಸ್. ಜಾನಕಿ ಅಂತ್ಯಸಂಸ್ಕಾರ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat