ಮೈಸೂರು : ದಕ್ಷಿಣ ಭಾರತದ ಗಾನ ಕೋಗಿಲೆ ಎಸ್. ಜಾನಕಿ ಅವರು ವಯೋಸಹಜ ಅನಾರೋಗ್ಯದಿಂದ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾಗಿದ್ದಾರೆ. 88 ವರ್ಷದವರಾಗಿದ್ದ ಅವರು, 6 ದಶಕಗಳ ಕಾಲ 17 ಭಾಷೆಗಳಲ್ಲಿ 48,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ಭಾರತೀಯ ಸಂಗೀತ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಇದೀಗ ಅವರ ಅಗಲಿಕೆಯಿಂದ ಸಂಗೀತ ಲೋಕದಲ್ಲಿ ಮೌನ ಆವರಿಸಿದೆ.
ಸದ್ಯ ಎಸ್. ಜಾನಕಿ ಅವರ ಪಾರ್ಥಿವ ಶರೀರವನ್ನು ಮೈಸೂರಿನ ಬೋಗಾದಿಯಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ. ಕಲವೇ ಕ್ಷಣಗಳಲ್ಲಿ ಕಪಾರ್ಥಿವ ಶರೀರಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ಪೂಜೆ ಬಳಿಕ ಸರ್ವಾಜನಿಕರಿಗೆ ಅಂತಿಮ ದರ್ಶನಕ್ಕೆ ಮಹಾರಾಜ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ.
ಎಸ್.ಜಾನಕಿ ಅವರ ಅಂತಿಮ ವಿಧಿ ವಿಧಾನಗಳನ್ನು ಮೊಮ್ಮಗಳು ಅಪ್ಸರಾ ನಡೆಸಲಿದ್ದು, ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಲಿದೆ. ಈಗಾಗಲೇ ನೂರಾರು ಮಂದಿ ಗಣ್ಯರು ಜಾನಕಿ ಅವರಿಗೆ ನಮನ ಸಲ್ಲಿಸಿದ್ದು, ಮಹಾರಾಜ ಮೈದಾನದಲ್ಲಿ ಸುಮಾರು 800 ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.
ಎಸ್. ಜಾನಕಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಸಿನಿ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. ಇನ್ನು, ಜಾನಕಿ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಜಿಲ್ಲಾಡಳಿತಕ್ಕೆ ಈಗಾಗಲೇ ಆದೇಶ ನೀಡಲಾಗಿದೆ. ಜಾನಕಿ ಅವರ ಕೊನೆಯ ಆಸೆ ಇಚ್ಛೆಯಂತೆಯೇ ಮೈಸೂರಿನಲ್ಲೇ ಅಂತ್ಯಕ್ರಿಯೆ ನಡೆಯಲಿದೆ. ಎಸ್. ಜಾನಕಿ ಅವರ ಅಂತ್ಯಕ್ರಿಯೆಲ್ಲಿ ಸರ್ಕಾರದ ಪರವಾಗಿ ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಫ್ರಾಂಚೈಸಿ ಕ್ರಿಕೆಟ್‌ಗೆ ಐಸಿಸಿ ಕಠಿಣ ನಿಯಮ? ಮ್ಯಾಚ್ ಫಿಕ್ಸಿಂಗ್ – ಬೆಟ್ಟಿಂಗ್ ಭೀತಿ ನಡುವೆ ಮಹತ್ವದ ನಿರ್ಧಾರದ ಸುಳಿವು



















