ಬೆಂಗಳೂರು : ಕರ್ನಾಟಕ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು. ಅದರಲ್ಲೂ ಬೆಂಗಳೂರಿನಲ್ಲೇ ಒಳ್ಳೆಯ ಸಂಬಳದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಶುಭ ಸಮಾಚಾರ ದೊರೆತಿದೆ. ರಾಜ್ಯ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ (KEA Recruitment 2026) ಖಾಲಿ ಇರುವ 750 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 750 ಲ್ಯಾಂಡ್ ಸರ್ವೇಯರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)
ಖಾಲಿ ಇರುವ ಹುದ್ದೆಗಳು: 750
ಹುದ್ದೆಗಳ ಹೆಸರು: ಲ್ಯಾಂಡ್ ಸರ್ವೇಯರ್
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 7
ಕಲ್ಯಾಣ ಕರ್ನಾಟಕ ಭಾಗದಲ್ಲಿ 190 ಹುದ್ದೆಗಳು ಹಾಗೂ ಕಲ್ಯಾಣ ಕರ್ನಾಟಕ ಹೊರತಾದ ಭಾಗದಲ್ಲಿ 560 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪಿಯುಸಿ ಹಾಗೂ ಪದವಿ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 18ರಿಂದ 40 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 37,500 ರೂಪಾಯಿಯಿಂದ 76,100 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಲಿಖಿತ ಪರೀಕ್ಷೆ (ಆನ್ ಲೈನ್ ಹಾಗೂ ಆಫ್ ಲೈನ್), ಎಂಡ್ಯುರೆನ್ಸ್ ಟೆಸ್ಟ್, ಫಿಸಿಕಲ್ ಸ್ಟಾಂಡರ್ಡ್ ಟೆಸ್ಟ್ ಹಾಗೂ ವೈದ್ಯಕೀಯ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. 2ಎ, 2ಬಿ, 3ಎ, 3ಬಿ ಸಮುದಾದಯವರಿಗೆ 3 ವರ್ಷ ಹಾಗೂ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ cetonline.karnataka.gov.in ಗೆ ಭೇಟಿ ನೀಡಬೇಕು
ಲ್ಯಾಂಡ್ ಸರ್ವೇಯರ್ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ತಿಂಗಳಿಗೆ 250 ರೂ. ಹೂಡಿಕೆ ಮಾಡಿದರೆ 17 ಲಕ್ಷ ರೂ. ಗಳಿಕೆಯ ಚಾನ್ಸ್ : ಏನಿದು ಹೊಸ ಯೋಜನೆ?



















