ಬೆಂಗಳೂರು : ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಇಂಡಿಯನ್ ಓವರ್ ಸೀಸ್ ಬ್ಯಾಂಕಿನಲ್ಲಿ (IOB Apprentice Recruitment 2026) ಖಾಲಿ ಇರುವ 750 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಪ್ರೆಂಟಿಸ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈಗ ತಾನೆ ಕೋರ್ಸ್ ಮುಗಿಸಿ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಂಬಳದ ಜತೆಗೆ ತರಬೇತಿ ಪಡೆಯಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಓವರ್ ಸೀಸ್ ಬ್ಯಾಂಕ್
ಒಟ್ಟು ಹುದ್ದೆಗಳು: 750
ಹುದ್ದೆಗಳ ಹೆಸರು: ಅಪ್ರೆಂಟಿಸ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಕೊನೆಯ ದಿನಾಂಕ: ಜುಲೈ 20
ಕರ್ನಾಟಕ, ಸೇರಿ ದೇಶಾದ್ಯಂತ ಖಾಲಿ ಇರುವ ಬ್ರ್ಯಾಂಚ್ ಗಳಲ್ಲಿ ನೇಮಕಾತಿ ನಡೆಯುತ್ತಿದೆ. ಕರ್ನಾಟಕದಲ್ಲಿ ಒಟ್ಟು 6 ಹುದ್ದೆಗಳು ಖಾಲಿ ಇವೆ. ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಮಾಸಿಕ 15,500 ಸಾವಿರ ರೂಪಾಯಿವರೆಗೆ ಸ್ಟೈಪೆಂಡ್ ನೀಡಲಾಗುತ್ತದೆ. ಲಿಖಿತ ಪರೀಕ್ಷೆ, ಸ್ಥಳೀಯ ಭಾಷಾ ಸಾಮರ್ಥ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಕನಿಷ್ಠ 20 ವರ್ಷದಿಂದ ಗರಿಷ್ಠ 28 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿಯವರಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಆಸಕ್ತಿ ಇರುವವರು https://beep.bfsissc.com ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಈಗಾಗಲೇ ವೃತ್ತಿ ತರಬೇತಿ ಪಡೆಯುತ್ತಿರುವವರು ಕೂಡ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.
ಇದನ್ನೂ ಓದಿ : ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!



















