ಬೆಂಗಳೂರು : ಇ-ಸ್ವತ್ತು 2.0 ವ್ಯವಸ್ಥೆಯಲ್ಲಿನ ತಾಂತ್ರಿಕ ಸಮಸ್ಯೆಗಳ ಕುರಿತು ವಿಪಕ್ಷ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರು ಬದಲಾದರೂ “ಸರ್ವರ್ ಡೌನ್ ಆಡಳಿತ” ಮಾತ್ರ ಬದಲಾಗಿಲ್ಲ ಎಂದು ಅವರು ಟೀಕಿಸಿದ್ದಾರೆ.

ಸಾಮಾಜಿಕ ಜಾಲತಾಣ Xನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಆರ್. ಅಶೋಕ್, ಇ-ಸ್ವತ್ತು 2.0 ಜನರ ಆಸ್ತಿಯನ್ನು ಕಾಪಾಡುವ ಯೋಜನೆಯಾಗದೇ, ಜನರನ್ನು ಸರ್ಕಾರಿ ಕಚೇರಿಗಳಿಗೆ ಅಲೆದಾಡಿಸುವ ಯೋಜನೆಯಾಗಿ ಪರಿಣಮಿಸಿದೆ. ಇದರಿಂದ ಗ್ರಾಮೀಣ ಭಾಗದ ಜನರು ಹೆಚ್ಚು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಗಡುಡುಗಿದ್ದಾರೆ.
ಇ-ಸ್ವತ್ತು 2.0 ವ್ಯವಸ್ಥೆಯಲ್ಲಿರುವ ತಾಂತ್ರಿಕ ದೋಷಗಳನ್ನು ಸರ್ಕಾರ ತಕ್ಷಣ ಸರಿಪಡಿಸಬೇಕು. ಬಾಕಿ ಉಳಿದಿರುವ ಅರ್ಜಿಗಳನ್ನು ಯುದ್ಧೋಪಾದಿಯಲ್ಲಿ ವಿಲೇವಾರಿ ಮಾಡಿ ಸಾರ್ವಜನಿಕರ ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇದೇ ವೇಳೆ, ಈ ಅವ್ಯವಸ್ಥೆಗೆ ಕಾರಣರಾದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿರುವ ಆರ್. ಅಶೋಕ್, ಜನಸಾಮಾನ್ಯರಿಗೆ ತೊಂದರೆಯಾಗದ ರೀತಿಯಲ್ಲಿ ಇ-ಸ್ವತ್ತು ಸೇವೆಗಳನ್ನು ಸುಗಮಗೊಳಿಸಬೇಕೆಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಪ್ರವೀಣ್ ನೆಟ್ಟಾರು ಕೊಲೆ ಕೇಸ್ : ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ!


















