ಕಲಬುರಗಿ : ನಗರ ಹೊರವಲಯದ ಜೇವರ್ಗಿ ರಸ್ತೆಯ ಪಾಣೇಗಾಂವ ಗ್ರಾಮದ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಪಾಣೇಗಾಂವ ತಾಂಡಾದ ನಿವಾಸಿಗಳಾದ ಸುಂದರ, ಧರ್ಮರಾಜ್ ಹಾಗೂ ಅನಿಲ್ ಎಂದು ಗುರುತಿಸಲಾಗಿದೆ. ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದ್ದು, ಅಪಘಾತದ ನಿಖರ ಕಾರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮೂವರು ಒಂದೇ ಬೈಕ್‌ನಲ್ಲಿ ತ್ರಿಬಲ್ ರೈಡಿಂಗ್ ಮಾಡುತ್ತಿದ್ದರು. ಅಲ್ಲದೆ, ಯಾರೂ ಹೆಲ್ಮೆಟ್ ಧರಿಸಿರಲಿಲ್ಲ ಎನ್ನಲಾಗಿದೆ. ಪರಿಣಾಮ ಅಪಘಾತದ ವೇಳೆ ತಲೆಗೆ ಗಂಭೀರ ಗಾಯಗಳಾಗಿ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಟ್ರಾಫಿಕ್–1 ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಪೈಪ್‌ಲೈನ್ ಕಾಮಗಾರಿ ಎಡವಟ್ಟು – ರಸ್ತೆ ಗುಂಡಿಯಲ್ಲಿ ಸಿಲುಕಿದ ಬಿಎಂಟಿಸಿ ಬಸ್!


















