ಬೆಂಗಳೂರು : ಈಗಷ್ಟೇ ಬಿ.ಇ, ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿ ಉದ್ಯೋಗ ಹುಡುಕುತ್ತಿದ್ದೀರಾ? ಅದರಲ್ಲೂ, ಕೇಂದ್ರ ಸರ್ಕಾರದ ಹುದ್ದೆ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಹೌದು, ಕೇಂದ್ರ ಸರ್ಕಾರಿ ಸ್ವಾಮ್ಯದ ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ (NHSRCL Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 454 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ (NHSRCL)
ಒಟ್ಟು ಹುದ್ದೆಗಳು: 454
ಹುದ್ದೆಗಳ ಹೆಸರು: ಟೆಕ್ನಿಶಿಯನ್, ಜೂನಿಯರ್ ಎಂಜಿನಿಯರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 5
ಮಹಾರಾಷ್ಟ್ರ, ಗುಜರಾತ್ ಹಾಗೂ ನವದೆಹಲಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಮಾನ್ಯತೆ ಪಡೆದ ವಿವಿ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ, ಐಟಿಐ, ಡಿಪ್ಲೋಮಾ, ಬಿಇ, ಬಿಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಮಾಸಿಕ 35 ಸಾವಿರ ರೂಪಾಯಿಯಿಂದ 1.10 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಕಂಪ್ಯೂಟರ್ ಆಧಾರಿತ ಟೆಸ್ಟ್, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿಗಳನ್ನು ಸಲ್ಲಿಸುವವರಿಗೆ 52 ವರ್ಷಗಳ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಇಡಬ್ಲ್ಯೂಎಸ್, ಒಬಿಸಿ ಸಮುದಾಯದವರಿಗೆ 400 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಅರ್ಜಿ ಸಲ್ಲಿಸುವವರು nhsrcl.in. ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ : 2,314 ವಿಶೇಷ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ; 76 ಸಾವಿರ ರೂ. ಸಂಬಳ



















