ದಾವಣಗೆರೆ : ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ತಮಿಳುನಾಡು ಮೂಲದ ಬಟ್ಟೆ ವ್ಯಾಪಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸಂತೇಬೆನ್ನೂರಿನ ಸರ್ಕಾರಿ ಪದವಿ ಕಾಲೇಜು ಬಳಿಯ ಬೀರೂರು–ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ ಕಾರು ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನ್ನು ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮಾರಾಟಕ್ಕೆ ತಂದಿದ್ದ ಬಟ್ಟೆಗಳ ಗಂಟುಗಳು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿವೆ. ಅಪಘಾತದ ತೀವ್ರತೆಗೆ ಕಾರು ಮೂರ್ನಾಲ್ಕು ಬಾರಿ ಪಲ್ಟಿ ಹೊಡೆದಿದೆ ಎನ್ನಲಾಗಿದೆ.
ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಘಟನಾ ಸಂಬಂಧ ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ : ಗೋಮಾತೆ ರಕ್ಷಣೆಗಾಗಿ ಮತ್ತೆ ರಣಕಹಳೆ : ಜುಲೈ 27ರಿಂದ ರಾಜ್ಯಾದ್ಯಂತ ಬೃಹತ್ ಅಭಿಯಾನ!

















