ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿರುವ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ಮೊದಲನೇ ಮಹಡಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟ ಹೊಗೆಯಿಂದ ರೋಗಿಗಳು ಆತಂಕಗೊಂಡಿದ್ದಾರೆ.
ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಬೆಂಕಿ ವ್ಯಾಪಿಸುತ್ತಿದ್ದಂತೆ ಆಸ್ಪತ್ರೆ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ರೋಗಿಗಳನ್ನು ಸುರಕ್ಷಿತವಾಗಿ ಹೊರಗೆ ಕರೆತಂದಿದ್ದಾರೆ. ದಟ್ಟ ಹೊಗೆಯಿಂದ ಜೀವ ಉಳಿಸಿಕೊಳ್ಳಲು ರೋಗಿಗಳು ಹಾಗೂ ಅವರ ಸಂಬಂಧಿಕರು ಆಸ್ಪತ್ರೆಯಿಂದ ಹೊರಗೆ ಓಡಿ ಬಂದಿದ್ದಾರೆ.
ಬೆಂಕಿ ನಂದಿಸಲು ಆಸ್ಪತ್ರೆ ಸಿಬ್ಬಂದಿ ಹರಸಾಹಸ ನಡೆಸಿದ್ದು, ಕೂಡಲೇ ಅಗ್ನಿಶಾಮಕ ಠಾಣೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ : ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!



















