ದಾವಣಗೆರೆ : ಜಿಲ್ಲೆಯ ಮಲೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಕಾಲೇಜು ಒಂದರಲ್ಲಿ ಉಪನ್ಯಾಸಕ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ.
ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಹಿನ್ನೆಲೆ ಉಪನ್ಯಾಸಕ ಮಲ್ಲಿಕಾರ್ಜುನ್ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿ ಪ್ರತಿಭಟನೆ ನಡೆಸಿದ್ದಾರೆ.
ಸಂತ್ರಸ್ತ ಯುವತಿಯೋರ್ವಳು ನೀಡಿದ ದೂರಿನ ಆಧಾರದ ಮೇಲೆ ಮಲೆಬೆನ್ನೂರು ಠಾಣೆಯಲ್ಲಿ ಉಪನ್ಯಾಸಕ ಮಲ್ಲಿಕಾರ್ಜುನ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಪೋಷಕರು ಕಾಲೇಜಿನ ಎದುರು ಪ್ರತಿಭಟನೆ ನಡೆಸಿ, ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಜಿಲ್ಲಾಡಳಿತ, ಉಪನ್ಯಾಸಕ ಮಲ್ಲಿಕಾರ್ಜುನ ಅವರನ್ನು ಅಮಾನತುಗೊಳಿಸಿದೆ. ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಸದ್ಯ ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಪೆಟ್ರೋಲ್ ಬಂಕ್‌ನಲ್ಲಿ ಮಾರಾಮಾರಿ – ಯುವಕನ ಕಾಲು, ತಲೆಗೆ ಕೊಡಲಿ ಏಟು.. ಎರಡೂ ಕೈಗಳು ಕಟ್!


















