ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು, ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ನಿನ್ನೆ ಅವರನ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಚೆನ್ನಮ್ಮ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದ್ದು, ಇನ್ನೂ ಮೂರು ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಲು ಹೆಚ್.ಡಿ. ದೇವೇಗೌಡರು ಆಸ್ಪತ್ರೆಗೆ ಭೇಟಿ ನೀಡಿ ಬಳಿಕ ಮನೆಗೆ ಮರಳಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ಡಿ. ರೇವಣ್ಣ ಕೂಡ ಆಸ್ಪತ್ರೆಗೆ ಆಗಮಿಸಿ ತಾಯಿಯ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಇದನ್ನೂ ಓದಿ : ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ KRS ಪಕ್ಷದ ಅಭ್ಯರ್ಥಿಯಾಗಿ ಡಾ. ಜಿ.ಆರ್ ಹೆಬ್ಬುರೂ ಘೋಷಣೆ!


















