ಮಂಗಳೂರು : ಡ್ರಗ್ಸ್ ಜಾಲದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದು, ಲೋಕಲ್ ಪೆಡ್ಲರ್‌ಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 5 ಕೋಟಿ ಮೌಲ್ಯದ 5 ಕೆಜಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಗಳನ್ನು ಮಹಮ್ಮದ್ ಅಲ್ಫಾಜ್ ಹಾಗೂ ಮಹಮ್ಮದ್ ಮುಸ್ತಾಫಾ ಎಂದು ಗುರುತಿಸಲಾಗಿದೆ. ಮಹಮ್ಮದ್ ಅಲ್ಫಾಜ್ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ನಿವಾಸಿಯಾಗಿದ್ದು, ಮಹಮ್ಮದ್ ಮುಸ್ತಾಫಾ ಬೆಳ್ತಂಗಡಿ ತಾಲೂಕಿನ ಲಾಯಿಲ ನಿವಾಸಿಯಾಗಿದ್ದಾನೆ.
ಆರೋಪಿಗಳನ್ನು ಬಾಗಲಕೋಟೆಯಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಇಬ್ಬರೂ ಲೋಕಲ್ ಪೆಡ್ಲರ್‌ಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು ಎನ್ನಲಾಗಿದೆ. ಈ ಜಾಲದ ಹಿಂದೆ ಇನ್ನೂ ಯಾರು ಇದ್ದಾರೆ ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಫುಟ್‌ಪಾತ್ ತೆರವು ಬೆನ್ನಲ್ಲೇ ಖಾಸಗಿ ಬಸ್‌ಗಳ ಮೇಲೂ ಸರ್ಕಾರದಿಂದ ಕಠಿಣ ಕ್ರಮ!



















