ಕೋಲಾರ : ಭೀಕರ ರಸ್ತೆ ಅಪಘಾತದಲ್ಲಿ ಪ್ಯಾಸೆಂಜರ್ ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಅರಾಬಿಕೊತ್ತನೂರು ಗೇಟ್ ಸಮೀಪ ಸಂಭವಿಸಿದೆ. ನರಸಾಪುರ ಗ್ರಾಮದ ನಿವಾಸಿ ನಿಖಿಲ್ (26) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ನರಸಾಪುರದಿಂದ ಕೋಲಾರ ಕಡೆಗೆ ಪ್ಯಾಸೆಂಜರ್ ಆಟೋ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ, ಹಿಂಬದಿಯಿಂದ ಬಂದ ಅಪರಿಚಿತ ವಾಹನ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ಚಾಲಕ ನಿಖಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತ ಸಂಭವಿಸಿದ ಕೂಡಲೇ ಡಿಕ್ಕಿ ಹೊಡೆದ ವಾಹನದ ಚಾಲಕ ಕಾರು ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪರಾರಿಯಾಗಿರುವ ವಾಹನ ಹಾಗೂ ಚಾಲಕನ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನಾ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಹೋಮ್‌ವರ್ಕ್‌ನಲ್ಲಿ ಹಿಂದೂ ವಿದ್ಯಾರ್ಥಿಗೆ ‘ಕಲಿಮಾ’ ಕಲಿಯಲು ಸೂಚನೆ : ಶಾಲೆ ವಿರುದ್ಧ ಪೋಷಕರ ಆಕ್ರೋಶ!


















