ಬೆಂಗಳೂರು : ನೀವು ಪಿಯುಸಿ ಮುಗಿಸಿದ್ದೀರಾ? ಅದರಲ್ಲೂ, ರಾಜ್ಯ ರಾಜಧಾನಿಬೆಂಗಳೂರಿನಲ್ಲೇ ಉದ್ಯೋಗ ಪಡೆಯಲು ಬಯಸುತ್ತಿದ್ದೀರಾ? ಹಾಗಾದರೆ, ಒಳ್ಳೆಯ ಅವಕಾಶವೊಂದು ನಿಮ್ಮ ಮನೆ ಬಾಗಿಲಿಗೆ ಬಂದಿದೆ. ಹೌದು, ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ (Karnataka Lokayukta Recruitment 2026) ಖಾಲಿ ಇರುವ 25 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಕ್ಲರ್ಕ್ ಹಾಗೂ ಟೈಪಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ.
ನೇಮಕಾತಿಯ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕಾಯುಕ್ತ
ಒಟ್ಟು ಹುದ್ದೆಗಳು: 25
ಹುದ್ದೆಗಳ ಹೆಸರು: ಟೈಪಿಸ್ಟ್ ಹಾಗೂ ಕ್ಲರ್ಕ್
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಆಗಸ್ಟ್ 17
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ಮಂಡಳಿಗಳಲ್ಲಿ ಪಿಯುಸಿ ಪಾಸಾಗಿರಬೇಕು. ಹಾಗೆಯೇ, ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 34,100 – 67,600 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಎಸ್ಸಿ, ಎಸ್ಟಿ ಸಮುದಾಯದವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 250 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಎಸ್ಸಿ, ಎಸ್ಟಿಯವರಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಮೆರಿಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ lokayukta.karnataka.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ಟ್ರಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ; ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವು!


















