ಬೆಂಗಳೂರು : ನೀವು ಇತ್ತೀಚೆಗಷ್ಟೇ ಬಿಇ, ಬಿ.ಟೆಕ್ ಕೋರ್ಸ್ ಮುಗಿಸಿದ್ದೀರಾ? ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಒಳ್ಳೆಯ ಅವಕಾಶ ಇಲ್ಲಿದೆ. ಕೇಂದ್ರ ಸರ್ಕಾರ ಅಧೀನದಲ್ಲಿ ಕಾರ್ಯನಿರ್ವಹಿಸುವ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ (HPCL Recruitment 2026) ಖಾಲಿ ಇರುವ 358 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಗ್ರಾಜ್ಯುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಂತಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL)
ಒಟ್ಟು ಹುದ್ದೆಗಳು: 358
ಹುದ್ದೆಗಳ ಹೆಸರು: ಗ್ರಾಜ್ಯುಯೇಟ್ ಅಪ್ರೆಂಟಿಸ್ ಟ್ರೈನಿ
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 31
ನೇಮಕಾತಿ ಹೊಂದಿದವರಿಗೆ ಮಾಸಿಕ 25 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 25 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳ ವಿನಾಯಿತಿ ನೀಡಲಾಗಿದೆ. ಒಬಿಸಿಯವರಿಗೆ ಮೂರು ವರ್ಷಗಳ ವಿನಾಯಿತಿ ಇದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಅರ್ಜಿ ಪರಿಶೀಲನೆ ಬಳಿಕ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ. ಇದಾದ ನಂತರ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರು hindustanpetroleum.com ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡ ಬಳಿಕ ಆನ್ ಲೈನ್ ಅರ್ಜಿಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು. ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು.
ಇದನ್ನೂ ಓದಿ : HLL Lifecare ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕ : ಫ್ರೆಶರ್‌ಗಳಿಗೆ ಗುಡ್ ನ್ಯೂಸ್



















