ಶಿವಮೊಗ್ಗ: ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪೆಕಟ್ಟೆ ಸಮೀಪದ ಕಟ್ಟಿನಹೊಳೆ ಗ್ರಾಮದಲ್ಲಿ ನಡೆದಿದೆ.
ಬೆಂಗಳೂರು ಮೂಲದ ಶ್ರೀಕಾಂತ್ (28) ಮೃತ ದುರ್ದೈವಿ. ಆತ ಮೂವರು ಸ್ನೇಹಿತರೊಂದಿಗೆ ಕೊಡಚಾದ್ರಿ ಪ್ರವಾಸಕ್ಕೆ ಶುಕ್ರವಾರ ತೆರಳಿ, ಕಟ್ಟಿನಹೊಳೆ ಗ್ರಾಮದ ಸ್ನೇಹಿತನ ಮನೆಯಲ್ಲಿ ತಂಗಿದ್ದರು. ಶನಿವಾರ ಗೆಳೆಯರೆಲ್ಲರೂ ಕೂಡಿ ಬೆಳಗ್ಗೆ ಕೊಡಚಾದ್ರಿ ಶಿಖರಕ್ಕೆ ತೆರಳಲು ಸಿದ್ಧತೆ ಮಾಡಿಕೊಂಡಿದ್ದರು.


















