ತುಮಕೂರು: ಕುಡಿತದ ಚಟಕ್ಕಾಗಿ ಬಿದ್ದು ತುಮಕೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನೀರಿನ ನಲ್ಲಿಯನ್ನು ಕಳವು ಮಾಡಿ ಪರಾರಿಯಾದ ಖದೀಮನ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಜನಸಂದಣಿ ಇರುವ ಬಸ್ ನಿಲ್ದಾಣದಲ್ಲೇ ಆರೋಪಿ ನೀರಿನ ನಲ್ಲಿಯನ್ನು ಕಳವು ಮಾಡಿ ಯಾರಿಗೂ ಅನುಮಾನ ಬಾರದಂತೆ ಸ್ಥಳದಿಂದ ಪರಾರಿಯಾಗಿದ್ದಾನೆ. ಕಳ್ಳತನದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕಳ್ಳನ ಧೈರ್ಯ ಹಾಗೂ ಕೈಚಳಕ ಕಂಡು ಸಾರ್ವಜನಿಕರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಘಟನೆ ತುಮಕೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ವೈರಲ್ ಆಗಿರುವ ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.
ಇದನ್ನೂ ಓದಿ : ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ : ಇಬ್ಬರು ಗಂಭೀರ



















