ಬೆಂಗಳೂರು : ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ನಿಧದ ಹಿನ್ನೆಲೆ ಕುಟುಂಬಸ್ಥರಲ್ಲಿ ಶೋಕ ಮಡುಗಟ್ಟಿದೆ. ಈ ನಡುವೆ ಅತ್ಯಾಚಾರ ಪ್ರಕರಣದಲ್ಲಿ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ತಮ್ಮ ಅಜ್ಜಿ ಚೆನ್ನಮ್ಮ ಅವರ ನಿಧನದ ಸುದ್ದಿ ತಿಳಿದ ಬಳಿಕ ಪೆರೋಲ್‌ಗಾಗಿ ಅರ್ಜಿ ಸಲ್ಲಿಸಿರುವುದಾಗಿ ತಿಳಿದುಬಂದಿದೆ.
ನಿಯಮಗಳ ಪ್ರಕಾರ ಕುಟುಂಬದಲ್ಲಿ ಅಗತ್ಯ ಹಾಗೂ ವಿಶೇಷ ಸಂದರ್ಭಗಳಲ್ಲಿ ಕೈದಿಗಳು ಪೆರೋಲ್ ಕೋರಲು ಅವಕಾಶವಿದೆ. ಆದರೆ ಪೆರೋಲ್ ಮಂಜೂರು ಮಾಡಬೇಕೇ ಬೇಡವೇ ಎಂಬುದು ಕಾರಾಗೃಹ ಇಲಾಖೆಯ ಸಂಬಂಧಿತ ಅಧಿಕಾರಿಗಳ ತೀರ್ಮಾನವನ್ನು ಅವಲಂಬಿಸಿದೆ.
ಇಂದು ಚೆನ್ನಮ್ಮ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಹಾಸನ ಜಿಲ್ಲೆಯ ಹೊಳೆನರಸೀಪುರಕ್ಕೆ ಕೊಂಡೊಯ್ಯಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಜ್ಜಿಯ ಅಂತಿಮ ದರ್ಶನಕ್ಕಾಗಿ ಪ್ರಜ್ವಲ್ ರೇವಣ್ಣ ಅವರಿಗೆ ಪೆರೋಲ್ ದೊರೆಯುತ್ತದೆಯೇ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಚೆನ್ನಮ್ಮ ಅವರ ಅಂತಿಮ ದರ್ಶನವನ್ನು ಈಗಾಗಲೇ ದೇವೇಗೌಡರ ಕುಟುಂಬದ ಸದಸ್ಯರು ಪಡೆದಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ಪ್ರಜ್ವಲ್ ರೇವಣ್ಣ ಮುದ್ದಿನ ಮೊಮ್ಮಗನಾಗಿದ್ದ ಹಿನ್ನೆಲೆ, ಅವರು ಅಜ್ಜಿಯ ಕೊನೆಯ ದರ್ಶನಕ್ಕೆ ಆಗಮಿಸುತ್ತಾರೆಯೇ ಎಂಬ ಪ್ರಶ್ನೆಗೆ ಪೆರೋಲ್ ಅರ್ಜಿಯ ಮೇಲಿನ ಅಧಿಕಾರಿಗಳ ನಿರ್ಧಾರವೇ ಉತ್ತರ ನೀಡಲಿದೆ.
ಇದನ್ನೂ ಓದಿ : ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ ಯಾವಾಗ-ಎಲ್ಲಿ? ಇಲ್ಲಿದೆ ಮಾಹಿತಿ



















