ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ದೇಶದ ನವರತ್ನ ಕಂಪನಿಗಳಲ್ಲಿ ಒಂದಾಗಿರುವ ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸಸ್ ಸಂಸ್ಥೆಯಲ್ಲಿ (RITES Recruitment 2026) ಖಾಲಿ ಇರುವ 24 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸಸ್ ಸಂಸ್ಥೆ (RITES)
ಒಟ್ಟು ಹುದ್ದೆಗಳು: 24
ಹುದ್ದೆಗಳ ಹೆಸರು: ಅಸಿಸ್ಟಂಟ್ ಮ್ಯಾನೇಜರ್
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 17
ಹರಿಯಾಣದ ಗುರುಗ್ರಾಮದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದು. ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿ.ಇ, ಬಿ.ಟೆಕ್ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 32 ವರ್ಷ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ 600 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ 300 ರೂಪಾಯಿ ನಿಗದಿಪಡಿಸಲಾಗಿದೆ.
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಲಾಗುತ್ತದೆ ಎಂಬುದಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.4 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು rites.com ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ : CJP ‘ಚಲೋ ಸಂಸದ್’ ರ್‍ಯಾಲಿ ; ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿ ಪ್ರಹಾರ.. ರಣರಂಗವಾದ ದೆಹಲಿ



















