ಉತ್ತರ ಕನ್ನಡ : ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿನ ಟೊಂಕದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಬೋಟ್ವೊಂದು ಸಂಪೂರ್ಣ ಸುಟ್ಟುಹೋಗಿರುವ ಘಟನೆ ನಡೆದಿದೆ. ಆಯುಬ್ ಸಾಬ್ ಎಂಬುವವರಿಗೆ ಸೇರಿದ ಪರ್ಷಿಯನ್ ಬೋಟ್ ಇದಾಗಿದೆ.
ಆಯುಬ್ ಸಾಬ್ ಬಂದರಿನಲ್ಲಿ ಬೋಟ್ ನಿಲ್ಲಿಸಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ಸಂಪೂರ್ಣ ಬೋಟ್ನ್ನು ಆವರಿಸಿದ್ದು, ಸುಟ್ಟು ಭಸ್ಮವಾಗಿದೆ.
ಬೋಟ್ಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಸ್ಥಳೀಯ ಮೀನುಗಾರರು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿ ನಂದಿಸಿದ್ದಾರೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಿಂದ 30 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ : ರಷ್ಯಾ ದಾಳಿ : ಕೇರಳದ ಮರ್ಚೆಂಟ್ ನೇವಿ ಅಧಿಕಾರಿ ಬಲಿ.. 3 ತಿಂಗಳ ಹಿಂದಷ್ಟೇ ಆಗಿತ್ತು ನಿಶ್ಚಿತಾರ್ಥ!



















