ಬೆಂಗಳೂರು : ಕರ್ನಾಟಕ ಸರ್ಕಾರದ ಉದ್ಯಮವಾಗಿರುವ ಕರ್ನಾಟಕ ರಾಜ್ಯ ಖನಿಜಗಳ ನಿಗಮ ನಿಯಮಿತದಲ್ಲಿ ಖಾಲಿ ಇರುವ 50 ಹುದ್ದೆಗಳ ನೇಮಕಾತಿಗಾಗಿ (KSMCL Recruitment 2026) ಅಧಿಸೂಚನೆ ಹೊರಡಿಸಲಾಗಿದೆ. 50 ಎಂಜಿನಿಯರ್ ಗಳು ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ನೇಮಕಾತಿಯ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಖನಿಜಗಳ ನಿಗಮ ನಿಯಮಿತ
ಒಟ್ಟು ಹುದ್ದೆಗಳು: 50
ಹುದ್ದೆಗಳ ಹೆಸರು: ಎಂಜಿನಿಯರ್ ಇತ್ಯಾದಿ
ಉದ್ಯೋಗ ಸ್ಥಳ: ಬೆಂಗಳೂರು
ನೇಮಕಾತಿ ವಿಧಾನ: ನೇರ ಸಂದರ್ಶನ
ಸಂದರ್ಶನ ನಡೆಯುವ ದಿನಾಂಕ: ಜುಲೈ 31
12 ಮೈನ್ ಪಾರ್ಟ್ ನರ್, 8 ಬ್ಲಾಸ್ಟರ್, 5 ಅಸಿಸ್ಟಂಟ್ ಮ್ಯಾನೇಜರ್, 7 ಅಸಿಸ್ಟಂಟ್ ಎಂಜಿನಿಯರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗುವವರು ಎಸ್ಸೆಸ್ಸೆಲ್ಸಿ, ಐಟಿಐ, ಡಿಪ್ಲೋಮಾ, ಡಿಗ್ರಿ, ಬಿ.ಇ, ಬಿ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗುವವರು ಮೊದಲಿಗೆ ksmc.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆ ಓದಿಕೊಂಡು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸದಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು.
ಸಂದರ್ಶನ ನಡೆಯುವ ಸ್ಥಳ
Karnataka State Minerals Corporation Limited, TTMC A Block, 5th Floor, BMTC Building, KH Road, Shanthinagar, Bangalore – 560027. ಮೂರು ದಿನ ಸಂದರ್ಶನ ನಡೆಯಲಿದೆ. ಜುಲೈ 29, 30 ಹಾಗೂ 31ರಂದು ಸಂದರ್ಶನಕ್ಕೆ ಹಾಜರಾಗಬಹುದು. ಹುದ್ದೆವಾರು ಸಂದರ್ಶನದ ದಿನಾಂಕವನ್ನು ಅಭ್ಯರ್ಥಿಗಳು ವೆಬ್ ಸೈಟ್ ನಲ್ಲೇ ಪರಿಶೀಲನೆ ಮಾಡಿಕೊಳ್ಳಬಹುದು. ನೇಮಕಾತಿ ಹೊಂದಿದವರಿಗೆ ಮಾಸಿಕ 50 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಇದನ್ನೂ ಓದಿ : ನ್ಯಾಷನಲ್ ಇನ್ಶೂರೆನ್ಸ್ ಕಂಪನಿಯಲ್ಲಿ 500 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ



















