ಬೆಂಗಳೂರು : ದೆಹಲಿಯಲ್ಲಿ ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಹೋರಾಟಗಳು ತೀವ್ರ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಈ ನಡುವೆ ರಾಜ್ಯದಲ್ಲೂ ಹೋರಾಟದ ಕಾವು ಜೋರಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆಯ ವೇಳೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆದುಕೊಂಡ ಪೊಲೀಸರ ನಡೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನ ನಡೆಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ಮಲ್ಲೇಶ್ವರ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆಗೆ ಮುಂದಾಗಿದ್ದು, ಕೇಂದ್ರ ಬಿಜೆಪಿ ಸರ್ಕಾರದ ನೀಟ್ ಪರೀಕ್ಷೆಯ ಅಕ್ರಮದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಪ್ರಧಾನಿ ಮೋದಿ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ : ವಿದ್ಯಾರ್ಥಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ : ರಾಹುಲ್ ವಿರುದ್ಧ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ!



















