ಬೆಂಗಳೂರು: ರಾಜ್ಯ ಸರ್ಕಾರದ ಹುದ್ದೆಗಳಿಗಾಗಿ ಪ್ರಯತ್ನ ನಡೆಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಕೋಲಾರದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (DHFWS Kolar Recruitment 2026) ಖಾಲಿ ಇರುವ 15 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. 15 ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೋಲಾರ
ಹುದ್ದೆ ಹೆಸರು: ಮೆಡಿಕಲ್ ಆಫೀಸರ್
ಒಟ್ಟು ಹುದ್ದೆ: 15
ಉದ್ಯೋಗ ಸ್ಥಳ: ಕೋಲಾರ
ಸಂದರ್ಶನ ನಡೆಯುವ ದಿನಾಂಕ: ಜುಲೈ 27
8 ಮೆಡಿಕಲ್ ಆಫೀಸರ್, 2 ಜೂನಿಯರ್ ಲ್ಯಾಬೊರೇಟರಿ ಟೆಕ್ನಿಕಲ್ ಆಫೀಸರ್, 4 ಫಾರ್ಮಾಸಿಸ್ಟ್ ಆಫೀಸರ್ ಹಾಗೂ 1 ಜೂನಿಯರ್ ಪ್ರೈಮರಿ ಹೆಲ್ತ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆಯಾ ಹುದ್ದೆಗಳಿಗೆ ಅನುಗುಣವಾಗಿ ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೋಮಾ, ಬಿಎಸ್ಸಿ ಬಿ.ಫಾರ್ಮ್ ಹಾಗೂ ಎಂಬಿಬಿಎಸ್ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ. ಗರಿಷ್ಠ 60 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 15,114 ರೂಪಾಯಿಯಿಂದ 60 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ
Office of the District Health and Family Welfare Officer, K.N.T.B. Sanatorium Hospital Premises, Bangarapet Road, Kolar – 563102. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ kolar.nic.in ವೆಬ್ ಸೈಟ್ ಗೆ ಭೇಟಿ ನೀಡಬಹುದು. ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು ಎಂದು ತಿಳಿಸಲಾಗಿದೆ.



















