ಬೆಂಗಳೂರು ಗ್ರಾಮಾಂತರ : ಮೊಟ್ಟೆ ಎಸೆತ ಘಟನೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಕೃಷ್ಣ ನೇತೃತ್ವ ವಹಿಸಿದ್ದಾರೆ. ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿ, ಘಟನೆಗೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೇವನಹಳ್ಳಿಯ ಬೀರಸಂದ್ರ ಬಳಿಯಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆ ಕೆಲಕಾಲ ಗಮನ ಸೆಳೆಯಿತು. ಘಟನೆ ಕುರಿತು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.



















