ಬೆಂಗಳೂರು : ಕೇಂದ್ರ ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (NABARD) ಅಂಗಸಂಸ್ಥೆಯಾಗಿರುವ ನ್ಯಾಬ್ ಫಿನ್ಸ್ ಸಂಸ್ಥೆಯಲ್ಲಿ (NABFINS Recruitment 2026) ಖಾಲಿ ಇರುವ ಹಲವು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಬೆಂಗಳೂರಿನಲ್ಲೇ ಕೇಂದ್ರ ಕಚೇರಿ ಹೊಂದಿರುವುದರಿಂದ ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಇದರಿಂದ ಅನುಕೂಲವಾಗಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆಯ ಹೆಸರು: ನ್ಯಾಬ್ ಫಿನ್ಸ್
ಖಾಲಿ ಹುದ್ದೆಗಳ ಸಂಖ್ಯೆ: ವಿವಿಧ
ಹುದ್ದೆಯ ಸ್ಥಳ: ಬೆಂಗಳೂರು
ಹುದ್ದೆಯ ಹೆಸರು: ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್ ಇತ್ಯಾದಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜುಲೈ 30
ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್ ಹಾಗೂ ಕಸ್ಟಮರ್ ಸರ್ವಿಸ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಡಿಪ್ಲೋಮಾ ಹಾಗೂ ಪದವಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆಗೆ ಒಳಪಡಿಸಲಾಗುತ್ತದೆ. ಇದಾದ ಬಳಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸುವವರು ಮೊದಲಿಗೆ nabfins.org ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆ ಓದಿಕೊಂಡು ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಮೇಲ್ ಮಾಡಬೇಕು. ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ nandish.m@nabfins.org ಗೆ ಮೇಲ್ ಮಾಡಬೇಕು ಹಾಗೂ ಕಸ್ಟಮರ್ ಸರ್ವಿಸ್ ಆಫೀಸರ್ ಹುದ್ದೆಗಳಿಗೆ swathi.s@nabfins.org ಗೆ ಮೇಲ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.



















