ಬೆಂಗಳೂರು : ಕೇಂದ್ರ ಸರ್ಕಾರದ ಮಹಾರತ್ನ ಕಂಪನಿಗಳಲ್ಲಿ ಒಂದಾಗಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ (HAL India Recruitment 2026) ಖಾಲಿ ಇರುವ 30 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಫೈನಾನ್ಸ್ ಆಫೀಸರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್
ಹುದ್ದೆ ಹೆಸರು: ಫೈನಾನ್ಸ್ ಆಫೀಸರ್ ಇತ್ಯಾದಿ
ಒಟ್ಟು ಹುದ್ದೆ: 30
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 12
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಫೈನಾನ್ಸ್ ಆಫೀಸರ್, ಮ್ಯಾನೇಜರ್ ಹಾಗೂ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ. ಎಚ್ಎಎಲ್ ಅನ್ವಯ ಶೈಕ್ಷಣಿಕ ಅರ್ಹತೆ ಪೂರ್ಣಗೊಳಿಸಿರಬೇಕು ಎಂದು ತಿಳಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ hal-india.co.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಿ, ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಇದನ್ನೂ ಓದಿ : ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 18 ಹುದ್ದೆಗಳ ನೇಮಕಾತಿ : 1.34 ಲಕ್ಷ ರೂ. ಸ್ಯಾಲರಿ



















