ಕೋಲಾರ : ಕೈ ಸಾಲಕ್ಕೆ ಹೆದರಿ ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕೋಲಾರ ತಾಲೂಕಿನ ಛತ್ರಕೋಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬೆಗ್ಲಿಬೆಣಜೇನಹಳ್ಳಿ ಗ್ರಾಮದ ನಿವಾಸಿಗಳಾದ ಪ್ರಮೀಳ, ಅವರ ಮಗಳು ಸ್ವಪ್ನ ಹಾಗೂ ಮಗ ರಂಜಿತ್ ಮೃತಪಟ್ಟವರು. ಮೃತರು ಸುರೇಶ್ ಎಂಬುವರ ಪತ್ನಿ ಮತ್ತು ಮಕ್ಕಳು ಎಂದು ತಿಳಿದುಬಂದಿದೆ.
ನಿನ್ನೆ ಸಂಜೆ ಮನೆಯಿಂದ ಪತ್ನಿ ಹಾಗೂ ಮಕ್ಕಳು ಕಾಣೆಯಾಗಿದ್ದರು. ಕುಟುಂಬಸ್ಥರು ಹುಡುಕಾಟ ನಡೆಸಿದ ಬಳಿಕ ಇಂದು ಬೆಳಗ್ಗೆ ಛತ್ರಕೋಡಹಳ್ಳಿ ಗ್ರಾಮದ ಕೃಷಿ ಹೊಂಡದಲ್ಲಿ ಮೂವರ ಶವಗಳು ಪತ್ತೆಯಾಗಿವೆ.
ಕೈ ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಮಂಡ್ಯದಲ್ಲಿ ಭೀಕರ ಸರಣಿ ಅಪಘಾತ : 60ಕ್ಕೂ ಹೆಚ್ಚು ಮಂದಿಗೆ ಗಾಯ!



















