ಬೆಂಗಳೂರು : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಸಂತಸ ವ್ಯಕ್ತಪಡಿಸಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ರಮ್ಯಾ, ಇದನ್ನು ಅತ್ಯಂತ ಖುಷಿಯ ಸುದ್ದಿ ಎಂದು ಬಣ್ಣಿಸಿದ್ದಾರೆ.

“ಇದು ಅತ್ಯಂತ ಖುಷಿಯ ಸುದ್ದಿ” ಎಂದು ಪೋಸ್ಟ್ ಮಾಡಿರುವ ರಮ್ಯಾ, ಕಾಕ್ರೋಚ್ ಜನತಾ ಪಾರ್ಟಿಯ ನಿರಂತರ ಪ್ರಯತ್ನ ಫಲ ನೀಡಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಪ್ರಯತ್ನವೂ ಯಶಸ್ವಿಯಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.
ಪರೀಕ್ಷಾ ಅಕ್ರಮ ಹಾಗೂ NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ನಡೆದ ಹೋರಾಟಕ್ಕೆ ಇದೀಗ ಜಯ ಸಿಕ್ಕಿದೆ ಎಂದು ರಮ್ಯಾ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ. “ಹೋರಾಟಕ್ಕೆ ಸಿಕ್ಕ ಜಯವಿದು” ಎಂದು ಬರೆದು ಸಂತಸ ವ್ಯಕ್ತಪಡಿಸಿದ್ದಾರೆ.
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ ಬೆನ್ನಲ್ಲೇ ರಮ್ಯಾ ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆಗಿದೆ.
ಇದನ್ನೂ ಓದಿ : ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ CJP ವಿಜಯೋತ್ಸವ ; ದೀಪ್ಕೆ ಹೇಳಿದ್ದೇನು?



















