ಬೆಂಗಳೂರು : ಕೇಂದ್ರ ಸರ್ಕಾರದ ಉದ್ಯೋಗ ಪಡೆಯಲು ಸಿದ್ಧತೆ ನಡೆಸುತ್ತಿರುವವರಿಗೆ ಒಳ್ಳೆಯ ಅವಕಾಶ ದೊರೆತಿದೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಖಾಲಿ ಇರುವ 389 ಹುದ್ದೆಗಳ ನೇಮಕಾತಿಗಾಗಿ (AAI Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ
ಹುದ್ದೆಗಳ ಹೆಸರು: ಮ್ಯಾನೇಜರ್ ಇತ್ಯಾದಿ
ಒಟ್ಟು ಹುದ್ದೆಗಳು: 389
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 7
ಮ್ಯಾನೇಜರ್ ಹಾಗೂ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸಿಎ, ಡಿಪ್ಲೋಮಾ, ಡಿಗ್ರಿ, ಬಿಇ, ಬಿ ಟೆಕ್, ಎಲ್ ಎಲ್ ಬಿ, ಎಂಬಿಎ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡುವವರು ಅರ್ಜಿ ಸಲ್ಲಿಸಬಹುದು. ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಒಬಿಸಿ, ಜನರಲ್ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಉಳಿದವರಿಗೆ 1 ಸಾವಿರ ರೂ. ಅರ್ಜಿ ಶುಲ್ಕವಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 1.4 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ aai.aero ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಿ, ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಇದನ್ನೂ ಓದಿ : ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ 104 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 83 ಸಾವಿರ ರೂ. ಸಂಬಳ



















