ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೇ ಉದ್ಯೋಗ ಹುಡುಕುತ್ತಿರುವವರಿಗೆ ಒಳ್ಳೆಯ ಅವಕಾಶ ಲಭಿಸಿದೆ. ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯು 142 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಬೆಂಗಳೂರು ನಗರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ 142 ಹೆಲ್ಪರ್ಸ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಬೆಂಗಳೂರು ಜಿಲ್ಲಾಧಿಕಾರಿ ಕಚೇರಿ
ಒಟ್ಟು ಹುದ್ದೆಗಳು: 142
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಆಗಸ್ಟ್ 21
ಉದ್ಯೋಗ ಸ್ಥಳ: ಬೆಂಗಳೂರು
ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಮಾದನಾಯಕನಹಳ್ಳಿ ನಗರಸಭೆಯಲ್ಲಿ 62 ಹಾಗೂ ಹೆಬ್ಬಗೋಡಿ ನಗರಸಭೆ ವ್ಯಾಪ್ತಿಯಲ್ಲಿ80 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಹೆಲ್ಪರ್ಸ್ ಹಾಗೂ ಕ್ಲೀನರ್ಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18ರಿಂದ ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ವಿದ್ಯಾರ್ಹತೆ ನಿಗದಿಪಡಿಸಿಲ್ಲ. ಆದರೆ, ಅಭ್ಯರ್ಥಿಗಳು ಕನ್ನಡ ಮಾತನಾಡುತ್ತಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮಾದನಾಯಕನಹಳ್ಳಿ ಹಾಗೂ ಹೆಬ್ಬಗೋಡಿ ನಗರಸಭೆ ಕಚೇರಿಗಳಲ್ಲಿ ಅರ್ಜಿ ನಮೂನೆಯನ್ನು ತೆಗೆದುಕೊಂಡು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಕಚೇರಿಗಳಲ್ಲಿಯೇ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ bengaluruurbandudc.mrc.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದು.
ಇದನ್ನೂ ಓದಿ : ಜಿಲ್ಲಾ ನ್ಯಾಯಾಲಯದಲ್ಲಿ 62 ಹುದ್ದೆಗಳ ನೇಮಕಾತಿ : 61 ಸಾವಿರ ರೂ. ಸ್ಯಾಲರಿ



















