ಬೆಂಗಳೂರು : ರಸ್ತೆ ಬದಿಯಲ್ಲಿ ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ಕಾಮುಕನೊಬ್ಬ ಕಿರುಕುಳ ನೀಡಿದ ಘಟನೆ ರಾಮಮೂರ್ತಿ ನಗರದಲ್ಲಿ ನಡೆದಿದೆ.
ರಸ್ತೆ ಬದಿಯಲ್ಲಿ ನಿಂತಿದ್ದ ಯುವತಿ ಬಳಿ ಕೆಎ–03–ಕೆ–06190 ನೋಂದಣಿ ಸಂಖ್ಯೆಯ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿ ಅಸಭ್ಯವಾಗಿ ವರ್ತಿಸಿದ್ದು, ‘ನಿನ್ನ ರೇಟ್ ಎಷ್ಟು? ಹತ್ತು ಸಾವಿರ ಕೊಡುತ್ತೇನೆ, ಬರುತ್ತೀಯಾ?’ ಎಂದು ಪ್ರಶ್ನಿಸಿದ್ದಾನೆ.
ಈ ವೇಳೆ ಯುವತಿ ತನ್ನ ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಲು ಆರಂಭಿಸಿದ್ದಾಳೆ. ವಿಡಿಯೋ ರೆಕಾರ್ಡ್ ಮಾಡುತ್ತಿರುವುದನ್ನು ಗಮನಿಸಿದರೂ ವ್ಯಕ್ತಿ ಅಸಭ್ಯ ವರ್ತನೆ ಮುಂದುವರಿಸಿದ್ದಾನೆ. ಬಳಿಕ “ಪೊಲೀಸರಿಗೆ ದೂರು ನೀಡುತ್ತೇನೆ” ಎಂದು ಯುವತಿ ಹೇಳುತ್ತಿದ್ದಂತೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅಲ್ಲಿಂದ ಪರಾರಿಯಾಗಿದ್ದಾನೆ.
ಯುವತಿ ಈ ಇಡೀ ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿ ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಬೆಂಗಳೂರು ನಗರದಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಪ್ರಶ್ನೆ ಎತ್ತಿರುವ ಯುವತಿ, ಬೆಂಗಳೂರು ಪೊಲೀಸರನ್ನು ಟ್ಯಾಗ್ ಮಾಡಿ ಆರೋಪಿಯನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿದ್ದಾರೆ.
ಇದನ್ನೂ ಓದಿ : ರಾಜ್ಯ ಸರ್ಕಾರಕ್ಕೆ ಸಂಕಷ್ಟ – ನೀಟ್ ರೀತಿ KPSC ಅಕ್ರಮದ ವಿರುದ್ಧ ಹೋರಾಟಕ್ಕೆ ಸಜ್ಜಾದ Gen-Zಗಳು!



















