ವಿಜಯನಗರ : ಹೊಸಪೇಟೆ ನಗರದ ಹೊರವಲಯದ ಭಟ್ರಳ್ಳಿ ಆಂಜನೇಯ ದೇವಸ್ಥಾನದ ಸಮೀಪದ ರೈಲ್ವೆ ಹಳಿಯಲ್ಲಿ 28 ವರ್ಷದ ಯುವಕನ ಮೃತದೇಹ ಎರಡು ಭಾಗಗಳಾಗಿ ಪತ್ತೆಯಾಗಿರುವ ಘಟನೆ ನಡೆದಿದ್ದು, ಹೊಟ್ಟೆ ಭಾಗದ ಮೇಲೆ ರೈಲು ಹರಿದ ಪರಿಣಾಮ ದೇಹ ಎರಡು ತುಂಡಾಗಿದೆ ಎಂದು ಶಂಕಿಸಲಾಗಿದೆ.
ಮೃತನನ್ನು ಹೊಸಪೇಟೆ ನಗರದ ರಾಣಿ ಪೇಟೆ ನಿವಾಸಿ ನಾಗರಾಜ್ (28) ಎಂದು ಗುರುತಿಸಲಾಗಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನಾ ಸಂಬಂಧ ಹೊಸಪೇಟೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದು ಅಪಘಾತವೇ, ಆತ್ಮಹತ್ಯೆಯೇ ಅಥವಾ ಬೇರೆ ಯಾವುದೇ ಕಾರಣವಿದೆಯೇ ಎಂಬ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!


















