ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ ಭೇಟಿಯ ನೆನಪಿನಲ್ಲಿ ನಿರ್ಮಿಸಲಾಗಿರುವ ‘ವಿವೇಕ ಸ್ಮಾರಕ’ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ಆಗಮಿಸುತ್ತಿದ್ದು, ಇಡೀ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಈ ಬೆನ್ನಲ್ಲೇ ವಿವೇಕ ಸ್ಮಾಕರ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಸರ್ಕಾರಿ ಹಾಗೂ ಖಾಸಗಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ.ವಿವೇಕ ಸ್ಮಾರಕ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮನದ ಹಿನ್ನೆಲೆ, ಸ್ಮಾರಕ ಸುತ್ತಮುತ್ತಲಿನ ಕೆಲ ಪ್ರದೇಶಗಳಲ್ಲಿ ಸಾರ್ವಜನಿರಕ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಆ ರಸ್ತೆಗಳಲ್ಲಿ ಸಂಪೂರ್ಣ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲಾಗಿದೆ. ಇದರೊಂದಿಗೆ ಸುತ್ತಮುತ್ತ ಪ್ರದೇಶಗಳಲ್ಲಿರುವ ಮಹಾರಾಣಿ ಶಾಲೆ, ಕಾಲೇಜು, ಮಹಾರಾಜ ಕಾಲೇಜು, ಮರಿಮಲ್ಲಪ್ಪ ಶಾಲೆ, ಕಾಲೇಜು, ಸದ್ವಿದ್ಯ ಶಾಲೆ, ರೋಟರಿ ವಿದ್ಯಾಸಂಸ್ಥೆಗೆ ರಜೆ ಘೋಷಣೆ ಮಾಡಲಾಗಿದೆ.
ಎಲ್ಲೆಲ್ಲಿ ನಿರ್ಭಂಧ?
ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗದಲ್ಲಿ ಸಾರ್ವಜನಿಕರು ಹಾಗೂ ವಾಹನಗಳ ಸಂಚಾರವನ್ನ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
* ಡಿಸಿ ಕಚೇರಿ ಜಂಕ್ಷನ್‌ನಿಂದ ಏಕಲವ್ಯ ವೃತ್ತದವರೆಗೆ
* ಮುಡಾ ಜಂಕ್ಷನ್‌ನಿಂದ ಡಾ. ಪದ್ಮ ವೃತ್ತದವರೆಗೆ
* ಪಡುವಾರಳ್ಳಿ ಜಂಕ್ಷನ್‌ನಿಂದ ಮೆಟ್ರೋಪೋಲ್ ವೃತ್ತದವರೆಗೆ
* ರೈಲ್ವೆ ನಿಲ್ದಾಣ ಜಂಕ್ಷನ್‌ನಿಂದ ಆರ್‌ಟಿಒ ವೃತ್ತದವರೆಗೆ
* ದಾಸಪ್ಪ ವೃತ್ತದಿಂದ ಹಸು-ಕರು ವೃತ್ತದವರೆಗೆ
* ಆಕಾಶವಾಣಿ ವೃತ್ತದಿಂದ ಮಾಲ್ಗುಡಿ ಜಂಕ್ಷನ್‌ವರೆಗೆ ಸಾರ್ವಜನಿರಕ ಪ್ರವೇಶಕ್ಕೆ ನಿರ್ಬಂಧ ಇರಲಿದೆ. ಪ್ರಧಾನಿ ಮೈಸೂರಿನಿಂದ ವಾಪಸ್ ತೆರಳಿದ ಬಳಿಕ ಪ್ರವೇಶ ಕಲ್ಪಿಸಲಾಗುತ್ತದೆ.



















