ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ (Bengaluru Rural District Development Cell Recruitment 2026) ಖಾಲಿ ಇರುವ 26 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 26 ಪೌರಕಾರ್ಮಿಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ನಗರಾಭಿವೃದ್ಧಿ ಕೋಶ
ಒಟ್ಟು ಹುದ್ದೆಗಳು: 26
ಹುದ್ದೆಗಳ ಹೆಸರು: ಪೌರಕಾರ್ಮಿಕ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಆಗಸ್ಟ್ 22
ದೊಡ್ಡಬಳ್ಳಾಪುರ ನಗರಸಭೆ, ಹೊಸಕೋಟೆ ನಗರಸಭೆ, ನೆಲಮಂಗಲ ನಗರಸಭೆ, ದೇವನಹಳ್ಳಿ, ವಿಜಯಪುರ ಪುರಸಭೆ ಹಾಗೂ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಈಗಾಗಲೇ ನೇರ ಪಾವತಿ ಆಧಾರದ ಮೇಲೆ ಪೌರಕಾರ್ಮಿಕರಾಗಿ ಕೆಲಸ ಮಾಡುವವರು ಕೂಡ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿಗಳನ್ನು ಆಯಾ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಯಲ್ಲಿ ನೀಡಲಾಗುತ್ತದೆ. ಕಚೇರಿಗಳಿಗೆ ತೆರಳಿ ಅರ್ಜಿಗಳನ್ನು ಪಡೆಯಬೇಕು. ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅದೇ ಕಚೇರಿಗಳಿಗೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು bangalorerural.nic.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.



















