ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ನೀಡಿರುವ ಆದೇಶವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಮಹಿಳಾ ಘಟಕ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಗಾಂಧಿನಗರದಲ್ಲಿರುವ ಕರವೇ ಕಚೇರಿಯಿಂದ ಫ್ರೀಡಂ ಪಾರ್ಕ್‌ವರೆಗೆ ಮಹಿಳಾ ಕಾರ್ಯಕರ್ತೆಯರು ಹಾಗೂ ಕನ್ನಡಪರ ಹೋರಾಟಗಾರರು ಮೆರವಣಿಗೆ ನಡೆಸಲಿದ್ದು, ಖಾಲಿ ಕೊಡಗಳನ್ನು ತೋರಿಸುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕದ ಕುಡಿಯುವ ನೀರಿನ ಹಕ್ಕು ಕಾಪಾಡಬೇಕು, ರೈತರ ಹಿತಾಸಕ್ತಿ ಹಾಗೂ ರಾಜ್ಯದ ಜಲಹಕ್ಕನ್ನು ರಕ್ಷಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಲಿದ್ದಾರೆ. ಜೊತೆಗೆ, CWRC ಶಿಫಾರಸು ಹಾಗೂ CWMA ನೀಡಿರುವ ನೀರು ಬಿಡುಗಡೆ ಆದೇಶವನ್ನು ವಿರೋಧಿಸಿ ಹೋರಾಟ ಮಾಡಿದ್ದಾರೆ.
ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರ ಸೂಚನೆಯಂತೆ ಹಮ್ಮಿಕೊಳ್ಳಲಾಗಿರುವ ಈ ಪ್ರತಿಭಟನೆಯಲ್ಲಿ ಮಹಿಳಾ ಕಾರ್ಯಕರ್ತೆಯರು, ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದಾರೆ.
ಇದನ್ನೂ ಓದಿ : ಪಂಚ ಪಾಲಿಕೆಗಳ ಖಾತೆಗೆ ಮತ್ತೊಂದು ಜವಾಬ್ದಾರಿ!



















