ಬೆಂಗಳೂರು: ನೀವೇನಾದರೂ ಬೀದರ್ ಜಿಲ್ಲೆಯವರಾಗಿದ್ದು, ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಪ್ರಯತ್ನಿಸುತ್ತಿದ್ದರೆ, ನಿಮಗೊಂದು ಸುವರ್ಣಾವಕಾಶ ಇದೆ. ಬೀದರ್ ಮಹಾನಗರ ಪಾಲಿಕೆಯಲ್ಲಿ (Bidar City Corporation Recruitment 2026) ಖಾಲಿ ಇರುವ 372 ಸಿವಿಲ್ ಸರ್ವೆಂಟ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ನೇಮಕಾತಿಯ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಬೀದರ್ ಮಹಾನಗರ ಪಾಲಿಕೆ
ಒಟ್ಟು ಹುದ್ದೆಗಳು: 372
ಉದ್ಯೋಗ ಸ್ಥಳ: ಬೀದರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಆಗಸ್ಟ್ 10
ಬೀದರ್ ಮಹಾನಗರ ಪಾಲಿಕೆಯಲ್ಲಿ 222 ಸಿವಿಲ್ ಸರ್ವೆಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಬಸವ ಕಲ್ಯಾಣ ನಗರ ಪಾಲಿಕೆಯಲ್ಲಿ 150 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18 ವರ್ಷಗಳಿಂದ 50 ವರ್ಷಗಳವರೆಗೆ ವಯೋಮಿತಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಹುದ್ದೆಗಳಿಗೆ ಯಾವುದೇ ವಿದ್ಯಾರ್ಹತೆ ನಿಗದಿಪಡಿಸಿಲ್ಲ. ಕನ್ನಡ ಮಾತನಾಡಲು ಬರುವವರು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಕೆ ಹೇಗೆ?
ಮೊದಲಿಗೆ bidar.nic.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು



















