ಬೆಂಗಳೂರು : ಬಿಎಸ್ಸಿ, ಡಿ.ಫಾರ್ಮಾ ಮುಗಿಸಿ, ರಾಜ್ಯ ಸರ್ಕಾರದ ಹುದ್ದೆ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ವಿಜಯಪುರದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (DHFWS Vijayapura Recruitment 2026) ಖಾಲಿ ಇರುವ 26 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ನರ್ಸಿಂಗ್ ಆಫೀಸರ್ ಸೇರು ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಜಯಪುರ
ಹುದ್ದೆ ಹೆಸರು: ನರ್ಸಿಂಗ್ ಆಫೀಸರ್ ಇತ್ಯಾದಿ
ಒಟ್ಟು ಹುದ್ದೆ: 26
ಉದ್ಯೋಗ ಸ್ಥಳ: ವಿಜಯಪುರ
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಆಗಸ್ಟ್ 7
ನರ್ಸಿಂಗ್ ಆಫೀಸರ್, ಫಾರ್ಮಸಿ ಆಫೀಸರ್, ಲ್ಯಾಬೊರೇಟರಿ ಟೆಕ್ನಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿಎಸ್ಸಿ ನರ್ಸಿಂಗ್, ಡಿ-ಫಾರ್ಮಾ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ 45 ವರ್ಷಗಳ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ vijayapura.nic.in ಗೆ ಭೇಟಿ ನೀಡಬೇಕು. ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಅಧಿಸೂಚನೆಯನ್ನು ಓದಿಕೊಂಡು, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
Office of the District Health and Family Welfare Officer Vijayapura 586101.
ಇದನ್ನೂ ಓದಿ : ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ 4 ಹುದ್ದೆಗಳ ನೇಮಕಾತಿ : ತಿಂಗಳಿಗೆ 1.6 ಲಕ್ಷ ರೂ. ಸ್ಯಾಲರಿ


















