ಬೆಂಗಳೂರು : ದೇಶದ ಪ್ರತಿಷ್ಠಿತ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO NRSC Recruitment 2026) ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ ನಲ್ಲಿ ಖಾಲಿ ಇರುವ 48 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 48 ಜೂನಿಯರ್ ರಿಸರ್ಚ್ ಫೆಲೊ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಸ್ರೋದ ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ (ISRO NRSC)
ಒಟ್ಟು ಹುದ್ದೆಗಳು: 48
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಹುದ್ದೆಗಳ ಹೆಸರು: ಜೂನಿಯರ್ ರಿಸರ್ಚ್ ಫೆಲೊ
ಉದ್ಯೋಗ ಸ್ಥಳ: ಬೆಂಗಳೂರು ಸೇರಿ ದೇಶದ ಹಲವೆಡೆ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 21
ಕರ್ನಾಟಕದ ಬೆಂಗಳೂರು, ರಾಜಸ್ಥಾನದ ಜೋಧ್ ಪುರ, ಮಹಾರಾಷ್ಟ್ರದ ನಾಗ್ಪುರ ಸೇರಿ ಹಲವೆಡೆ ನೇಮಕಾತಿ ನಡೆಯುತ್ತಿದೆ. 19 ಜೂನಿಯರ್ ರಿಸರ್ಚ್ ಫೆಲೊ, 14 ಸೈಂಟಿಸ್ಟ್, 5 ಪ್ರಾಜೆಕ್ಟ್ ಅಸೋಸಿಯೇಟ್, 10 ಪ್ರಾಜೆಕ್ಟ್ ಸೈಂಟಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 56,100 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವವರು ಬಿ.ಇ, ಬಿ.ಟೆಕ್, ಎಂಎಸ್ಸಿ, ಬಿಎಸ್ಸಿ, ಎಂ.ಇ, ಎಂಎಸ್ಸಿ ಕೋರ್ಸ್ ಮುಗಿಸಿರಬೇಕು. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18ರಿಂದ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು isro.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದು.
ಇದನ್ನೂ ಓದಿ : KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ



















