ಬೆಂಗಳೂರು : ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (CIMS Chamarajanagar Recruitment 2026) ಖಾಲಿ ಇರುವ 49 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಪ್ರೊಫೆಸರ್ ಹಾಗೂ ಮೆಡಿಕಲ್ ಆಫೀಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ
ಒಟ್ಟು ಹುದ್ದೆಗಳು: 49
ಹುದ್ದೆಗಳ ಹೆಸರು: ಪ್ರೊಫೆಸರ್ ಹಾಗೂ ಮೆಡಿಕಲ್ ಆಫೀಸರ್
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಆಗಸ್ಟ್ 14
1 ಪ್ರೊಫೆಸರ್, 6 ಅಸೋಸಿಯೇಟ್ ಪ್ರೊಫೆಸರ್, 40 ಅಸಿಸ್ಟಂಟ್ ಪ್ರೊಫೆಸರ್ ಸೇರಿ ಹಲವು ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಂಡಿ, ಎಂಎಸ್, ಎಂಡಿಎಸ್, ಎಂಎಸ್ಸಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 42 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 2.18 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಪ್ರತಿಯೊಬ್ಬರಿಗೂ 4 ಸಾವಿರ ರೂಪಾಯಿ ಅರ್ಜಿ ಶುಲ್ಕವಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು cimscrnagara.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು. ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಕಳುಹಿಸಬೇಕಾದ ವಿಳಾಸ
ನಿರ್ದೇಶಕರು, ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಚಾಮರಾಜನಗರ, 571313.
ಇದನ್ನೂ ಓದಿ : ಜಯದೇವ ಆಸ್ಪತ್ರೆಯಲ್ಲಿ 34 ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ



















