ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಕರ್ನಾಟಕದ ಉಡುಪಿಯಲ್ಲಿರುವ ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ (UCSL Recruitment 2026) ಖಾಲಿ ಇರುವ 11 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಐಟಿಐ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನೇಮಕಾತಿ ಸಂಸ್ಥೆ: ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್
ಹುದ್ದೆಗಳ ಹೆಸರು: ಐಟಿಐ ಟ್ರೇಡ್ ಅಪ್ರೆಂಟಿಸ್
ಒಟ್ಟು ಹುದ್ದೆಗಳು: 11
ಉದ್ಯೋಗ ಸ್ಥಳ: ಉಡುಪಿ
ಅರ್ಜಿ ಸಲ್ಲಿಸಲು ಕೊನೆಯ ದಿನ: ಆಗಸ್ಟ್ 13
2 ಡೀಸೆಲ್ ಮೆಕ್ಯಾನಿಕ್, 5 ಎಲೆಕ್ಟ್ರಿಶಿಯನ್ ಹಾಗೂ 5 ಪ್ಲಂಬರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಐಟಿಐ, ಎಸ್ಸೆಸ್ಸೆಲ್ಸಿ ಮುಗಿಸಿರಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 12,600 ಲಕ್ಷ ರೂಪಾಯಿವರೆಗೆ ಸ್ಟೈಪೆಂಡ್ ನೀಡಲಾಗುತ್ತದೆ. ಇತ್ತೀಚೆಗಷ್ಟೇ ಐಟಿಐ ಮುಗಿಸಿ, ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ವೃತ್ತಿ ತರಬೇತಿ ಪಡೆಯಬೇಕು ಎನ್ನುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ.
ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 18 ವರ್ಷಗಳ ವಯೋಮಿತಿ ನಿಗಿದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ udupicsl.com ವೆಬ್ ಸೈಟ್ ಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆ ಓದಿಕೊಳ್ಳಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ದಾಖಲೆಗಳ ಸಾಫ್ಟ್ ಕಾಪಿಗಳನ್ನು career@udupicsl.com ಗೆ ಮೇಲ್ ಮಾಡಬೇಕು.
ಇದನ್ನೂ ಓದಿ : ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ



















