ಬೆಂಗಳೂರು : ನೀವು ಚಿಕ್ಕಬಳ್ಳಾಪುರ ಜಿಲ್ಲೆಯವರಾಗಿದ್ದು, ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಹುಡುಕುತ್ತಿದ್ದೀರಾ? ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಚಿಕ್ಕಬಳ್ಳಾಪುರದ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ (Zilla Panchayat Chikkaballapur recruitment 2026) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಮ್ಯುನಿಟಿ ಹೆಲ್ತ್ ಆಫೀಸರ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಪಂಚಾಯಿತಿ, ಚಿಕ್ಕಬಳ್ಳಾಪುರ
ಹುದ್ದೆ ಹೆಸರು: ಕಮ್ಯುನಿಟಿ ಹೆಲ್ತ್ ಆಫೀಸರ್
ಒಟ್ಟು ಹುದ್ದೆ: 1
ಉದ್ಯೋಗ ಸ್ಥಳ: ಚಿಕ್ಕಬಳ್ಳಾಪುರ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 31
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿಎಎಂಎಸ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 25 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ chikkaballapur.nic.in ಗೆ ಭೇಟಿ ನೀಡಬೇಕು.
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಯ ಅಧಿಸೂಚನೆ ಓದಬೇಕು
ಅರ್ಜಿಯ ಪ್ರಿಂಟೌಟ್ ತೆಗದುಕೊಂಡು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
To the District AYUSH Officers, District AYUSH Office, Chikkaballapur-562101
ಇದನ್ನೂ ಓದಿ : ಖಾಸಗಿ ಕಂಪನಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಪಿಎಫ್ ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ



















