ಬೆಂಗಳೂರು : ನೀವು ಈಗಷ್ಟೇ ಡಿಗ್ರಿ, ಮಾಸ್ಟರ್ ಡಿಗ್ರಿ ಮುಗಿಸಿದ್ದೀರಾ? ಕೇಂದ್ರ ಸರ್ಕಾರದ ಉದ್ಯೋಗಕ್ಕಾಗಿ ಪ್ರಯತ್ನ ನಡೆಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಲಭಿಸಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ರೈಲ್ವೆ ಕೆಟರಿಂಗ್ ಹಾಗೂ ಪ್ರವಾಸೋದ್ಯಮ ನಿಗಮದಲ್ಲಿ (IRCTC Recruitment 2026) ಖಾಲಿ ಇರುವ 5 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಟೂರಿಸಂ ಮಾನಿಟರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಈ ಕೆಳಗಿನಂತಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ರೈಲ್ವೆ ಕೆಟರಿಂಗ್ ಹಾಗೂ ಪ್ರವಾಸೋದ್ಯಮ ನಿಗಮ (IRCTC)
ಹುದ್ದೆಗಳ ಹೆಸರು: ಟೂರಿಸಂ ಮಾನಿಟರ್
ಒಟ್ಟು ಹುದ್ದೆಗಳು: 5
ನೇಮಕಾತಿ ವಿಧಾನ: ನೇರ ಸಂದರ್ಶನ
ಉದ್ಯೋಗ ಸ್ಥಳ: ಕರ್ನಾಟಕ ಸೇರಿ ದೇಶದ ಹಲವೆಡೆ
ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನಲ್ಲಿ ನೇಮಕಾತಿ ನಡೆಯುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 35 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ irctc.com ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಲ್ಲಿ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಓದಬೇಕು. ಅಧಿಸೂಚನೆಯಲ್ಲಿ ತಿಳಿಸಿದ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು.
ಸಂದರ್ಶನ ನಡೆಯುವ ಸ್ಥಳ
6A, The Rain Tree Place, No.9, Mc Nichols Road, Chetpet, Chennai – 600031
ಇದನ್ನೂ ಓದಿ : ನಾಳೆಯಿಂದ ಅಮೆಜಾನ್ ಫ್ರೀಡಂ ಸೇಲ್ : ಸ್ಮಾರ್ಟ್ ಫೋನ್ ಖರೀದಿಸುವವರಿಗೆ ಭರ್ಜರಿ ಡಿಸ್ಕೌಂಟ್



















