ಬೆಂಗಳೂರು : ನೀವೇನಾದರೂ ನೆಟ್, ಸೆಟ್ ತೇರ್ಗಡೆ ಹೊಂದಿ, ಬೋಧಕ ಸಿಬ್ಬಂದಿಯಾಗಿ ಕೆಲಸ ಮಾಡಲು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಒಳ್ಳೆಯ ಅವಕಾಶ ದೊರೆತಿದೆ. ಬೆಂಗಳೂರು ವಿಶ್ವವಿದ್ಯಾಲಯದ (Bangalore University Recruitment 2026) ಜ್ಞಾನ ಭಾರತಿ ಕ್ಯಾಂಪಸ್ ನಲ್ಲಿ ಖಾಲಿ ಇರುವ ಹಲವು ಬೋಧಕ ಸಿಬ್ಬಂದಿಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಬೆಂಗಳೂರು ವಿಶ್ವವಿದ್ಯಾಲಯ
ಒಟ್ಟು ಹುದ್ದೆಗಳು: ವಿವಿಧ
ಹುದ್ದೆಗಳ ಹೆಸರು: ಗೆಸ್ಟ್ ಫ್ಯಾಕಲ್ಟಿ
ಉದ್ಯೋಗ ಸ್ಥಳ: ಬೆಂಗಳೂರು, ರಾಮನಗರ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಆಗಸ್ಟ್ 21
ಜ್ಞಾನಭಾರತಿ ಕ್ಯಾಂಪಸ್ ನ ಪಿಜಿ ವಿಭಾಗದಲ್ಲಿ ಹಿಂದಿ, ಇತಿಹಾಸ, ಕೆಮಿಸ್ಟ್ರಿ ಸೇರಿ ಹಲವು ವಿಷಯಗಳ ಬೋಧಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ರಾಮನಗರದಲ್ಲಿರುವ ಪಿಜಿ ಸೆಂಟರ್ ನಲ್ಲಿ ಕನ್ನಡ, ಅರ್ಥಶಾಸ್ತ್ರ, ಇತಿಹಾಸ ಸೇರಿ ಹಲವು ವಿಷಯಗಳ ಬೋಧಕ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರು ವಿದ್ಯಾರ್ಹತೆ ಜತೆಗೆ ನೆಟ್, ಸೆಟ್ ತೇರ್ಗಡೆ ಹೊಂದಿರಬೇಕು ಎಂದು ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 50 ಸಾವಿರ ರೂ. ಸಂಬಳ ನೀಡಲಾಗುತ್ತದೆ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಉಳಿದವರಿಗೆ 200 ರೂಪಾಯಿ ಅರ್ಜಿ ಶುಲ್ಕವಿದೆ. ಅರ್ಜಿ ಸಲ್ಲಿಸಲು ಬಯಸುವವರು bangaloreuniversity.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆ ಓದಿಕೊಂಡ ಬಳಿಕ ಅರ್ಜಿಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.
ಇದನ್ನೂ ಓದಿ : ಲೋಕಾರ್ಪಣೆಗೊಂಡ ಕೆಲವೇ ವಾರದಲ್ಲಿ ಕುಸಿದ ಉ.ಪ್ರದೇಶದ 4,200 ಕೋಟಿ ರೂ. ವೆಚ್ಚದ ಎಕ್ಸ್‌ಪ್ರೆಸ್‌ವೇ


















