ಬೆಂಗಳೂರು : ನೀವು ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿದ್ದೀರಾ? ಬೆಂಗಳೂರಿನಲ್ಲೇ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇದೆ. ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (NIMHANS)ಯಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ (NIMHANS Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಒಂದು ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
ಒಟ್ಟು ಹುದ್ದೆಗಳು: 01
ಹುದ್ದೆಗಳ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್
ಉದ್ಯೋಗ ಸ್ಥಳ: ಬೆಂಗಳೂರು
ನೇಮಕಾತಿ ವಿಧಾನ: ನೇರ ಸಂದರ್ಶನ
ಸಂದರ್ಶನದ ದಿನಾಂಕ: ಆಗಸ್ಟ್ 19
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿದವರು ಸಂದರ್ಶನಕ್ಕೆ ಹಾಜರಾಗಬಹುದು. ಗರಿಷ್ಠ 40 ವರ್ಷದೊಳಗಿನ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು nimhans.ac.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಬೆಳಗ್ಗೆ 10 ಗಂಟೆಗೆ ಸಂದರ್ಶನ ಆರಂಭವಾಗುತ್ತದೆ. ಇದಕ್ಕೂ ಅರ್ಧ ಗಂಟೆ ಮೊದಲು ಆಗಮಿಸಿ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 40 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಗುರುತಿನ ಚೀಟಿ, ಶೈಕ್ಷಣಿಕ ದಾಖಲೆಗಳು ಸೇರಿ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ. ನೇಮಕಾತಿ ಹೊಂದಿದವರು 2029ರ ಡಿಸೆಂಬರ್ 31ರವರೆಗೆ ಕೆಲಸ ಮಾಡಬಹುದು.
ಸಂದರ್ಶನ ನಡೆಯುವ ಸ್ಥಳ
Board Room and Exam Hall on the 4th floor of NBRC Building, NIMHANS, Bangalore – 560029.
ಇದನ್ನೂ ಓದಿ ; ಕ್ಯಾಪ್ಟನ್ ಕೂಲ್ ಕಟ್ಟುನಿಟ್ಟಿನ ನಿಯಮ : ಧೋನಿ ಹೊಟೇಲ್ ರೂಮ್ ಸೀಕ್ರೆಟ್ ಬಿಚ್ಚಿಟ್ಟ ರಹಾನೆ!



















