ಬೆಂಗಳೂರು: ಕ್ಯಾಮೆರಾ ಹಾಗೂ ಆಪ್ಟಿಕಲ್ ಲೆನ್ಸ್ ಗಳಿಗೆ ಜಗತ್ ವಿಖ್ಯಾತಿ ಗಳಿಸಿರುವ ನಿಕಾನ್ ಕಂಪನಿಯು ಭಾರತದ ವಿದ್ಯಾರ್ಥಿಗಳಿಗೆ 1 ಲಕ್ಷ ರೂಪಾಯಿ ವಿದ್ಯಾರ್ಥಿವೇತನ (Nikon Scholarship Program 2026-27) ಘೋಷಣೆ ಮಾಡಿದೆ. ಫೋಟೋಗ್ರಫಿಗೆ ಸಂಬಂಧಿಸಿದ ಕೋರ್ಸ್ ಗಳಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ನಿಕಾನ್ ಕಂಪನಿಯಿಂದ 1 ಲಕ್ಷ ರೂಪಾಯಿ ಸ್ಕಾಲರ್ ಶಿಪ್ ಪಡೆಯಲಿದ್ದಾರೆ.
ದೇಶದ ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ ಫೋಟೋಗ್ರಫಿಗೆ ಸಂಬಂಧಿಸಿದ ಕೋರ್ಸ್ ಗಳಿಗೆ ಪ್ರವೇಶ ಪಡೆದಿರುವವರು ಅರ್ಜಿ ಸಲ್ಲಿಸಬಹುದು. ಕನಿಷ್ಠ 3 ತಿಂಗಳು ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಕೋರ್ಸ್ ಗಳಿಗೆ ಪ್ರವೇಶ ಪಡೆದವರಿಗೆ ಮಾತ್ರ ಸ್ಕಾಲರ್ ಶಿಪ್ ನೀಡಲಾಗುತ್ತದೆ. ಗರಿಷ್ಠ 1 ಲಕ್ಷ ರೂಪಾಯಿವರೆಗೆ ಸ್ಕಾಲರ್ ಶಿಪ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರ ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ರೂ. ದಾಟಿರಬಾರದು ಎಂದು ತಿಳಿಸಲಾಗಿದೆ.
ಉದಾಹರಣೆಗೆ, ವಿದ್ಯಾರ್ಥಿಯ ಕೋರ್ಸ್ ಫೀಸ್ 70 ಸಾವಿರ ರೂ. ಇದ್ದರೆ, ಅಷ್ಟೇ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಫೀಸ್ 1.5 ಲಕ್ಷ ರೂ. ಇದ್ದರೆ 1 ಲಕ್ಷ ರೂ. ವಿದ್ಯಾರ್ಥಿವೇತನ ನೀಡಲಾಗುತ್ತದೆ. ಪಿಯುಸಿ ಪಾಸಾಗಿ, ಫೋಟೋಗ್ರಫಿ ಕೋರ್ಸಿಗೆ ಪ್ರವೇಶ ಪಡೆದವರು ಮಾತ್ರ ವಿದ್ಯಾರ್ಥಿವೇತನಕ್ಕೆ ಅರ್ಹರು. ಫೋಟೋಗ್ರಫಿಯಲ್ಲಿ ವೃತ್ತಜೀವನ ಆರಂಭಿಸಬೇಕು, ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂಬ ಆಕಾಂಕ್ಷೆ ಇರುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು https://www.buddy4study.com/page/nikon-scholarship-program ಅಧಿಕೃತ ಪೋರ್ಟಲ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 24 ಕೊನೆಯ ದಿನವಾಗಿದೆ.



















