ಬೆಂಗಳೂರು: ನೀವೇನಾದರೂ ಡಿಪ್ಲೋಮಾ ಕೋರ್ಸ್ ಮುಗಿಸಿ ಸರ್ಕಾರದ ಹುದ್ದೆಗಳನ್ನು ಹುಡುಕುತ್ತಿದ್ದರೆ, ನಿಮಗೊಂದು ಸುವರ್ಣಾವಕಾಶ ದೊರೆತಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಸೆಂಟ್ರಲೈಸ್ಡ್ ರಿಕ್ರ್ಯೂಟ್ ಮೆಂಟ್ ಬೋರ್ಡ್ ನಲ್ಲಿ ಖಾಲಿ ಇರುವ 244 ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸ್ಟೆನೋಗ್ರಾಫರ್ ಸೇರಿ ಹಲವು ಹುದ್ದೆಗಳನ್ನು (ISRO ICRB Recruitment 2026) ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ
ಒಟ್ಟು ಹುದ್ದೆಗಳು: 244
ಹುದ್ದೆಗಳ ಹೆಸರು: ಸ್ಟೆನೋಗ್ರಾಫರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 16
130 ಅಸಿಸ್ಟಂಟ್, 10 ಸ್ಟೆನೋಗ್ರಾಫರ್, 82 ಜೂನಿಯರ್ ಪರ್ಸನಲ್ ಅಸಿಸ್ಟಂಟ್ ಹಾಗೂ 22 ಉಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಕರ್ನಾಟಕದ ಬೆಂಗಳೂರು, ಹಾಸನ, ಕೇರಳ, ನವದೆಹಲಿ ಸೇರಿ ದೇಶದಹಲವೆಡೆ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಡಿಪ್ಲೋಮಾ, ಪದವಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವವರಿಗೆ 18 ವರ್ಷದಿಂದ 28 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವ ಪ್ರತಿಯೊಬ್ಬರಿಗೂ 100 ರೂಪಾಯಿ ಅರ್ಜಿ ಶುಲ್ಕವಿದೆ. ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ isro.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಗಮನವಿಟ್ಟು ಓದಿಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಅರ್ಜಿಯನ್ನು ಭರ್ತಿ ಮಾಡುವ ಜತೆಗೆ ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


















