ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಶಿಕಾರಿಪುರ ತಾಲೂಕಿನ ರೈತರ ಜೀವನಾಡಿ ಎನಿಸಿರುವ ಅಂಬ್ಲಿಗೋಳ ಜಲಾಶಯ ಭರ್ತಿಯಾಗಿದೆ. ಡ್ಯಾಮ್ ಭರ್ತಿಯಾದ ಬೆನ್ನಲ್ಲೇ ಸಂಸದ ಬಿ.ವೈ ರಾಘವೇಂದ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ನದಿಗೆ ಬಾಗಿನ ಅರ್ಪಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಸಂಸದರು ಮಾಹಿತಿ ಹಂಚಿಕೊಂಡಿದ್ದಾರೆ. ಪೋಸ್ಟ್‌ನಲ್ಲಿ, ಜಲಾಶಯ ಭರ್ತಿಯಾಗಿ ಕೋಡಿ ಬೀಳುತ್ತಿರುವುದು ಅತ್ಯಂತ ಸಂತಸದ ವಿಷಯ. ಇಂದು ಈ ಪವಿತ್ರ ಜಲಾಶಯಕ್ಕೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಲಾಯಿತು ಎಂದು ಬರೆದುಕೊಂಡಿದ್ದಾರೆ.ವರುಣದೇವನ ಕೃಪೆಯಿಂದ ಶಿಕಾರಿಪುರ ತಾಲೂಕು ಸೇರಿದಂತೆ ನಮ್ಮ ಶಿವಮೊಗ್ಗ ಜಿಲ್ಲೆಯಾದ್ಯಂತ ಕೃಷಿ ಸಮೃದ್ಧಿ ಹೆಚ್ಚಲಿ. ಪ್ರತಿಯೊಬ್ಬ ರೈತ ಕುಟುಂಬದಲ್ಲೂ ಸುಖ, ಶಾಂತಿ ಮತ್ತು ಸಂತಸ ನೆಲೆಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ಇದೇ ವೇಳೆ ವಿಜಯೇಂದ್ರ ಹಾಗೂ ರಾಘವೇಂದ್ರ ಅವರು ಶಿಕಾರಿಪುರ ಪಟ್ಟಣದಲ್ಲಿರುವ ಶ್ರೀ ಹುಚ್ಚುರಾಯ ಸ್ವಾಮಿ ದೇವಸ್ಥಾನಕ್ಕೂ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇದನ್ನೂ ಓದಿ : ರಾಹುಲ್ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತರು



















