ಬೆಂಗಳೂರು : ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಇಂಡಿಯನ್ ಓವರ್ ಸೀಸ್ ಬ್ಯಾಂಕಿನಲ್ಲಿ (IOB Apprentice Recruitment 2026) ಖಾಲಿ ಇರುವ 250 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಲೋಕಲ್ ಬ್ಯಾಂಕ್ ಆಫೀಸರ್ ಅಥವಾ ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಓವರ್ ಸೀಸ್ ಬ್ಯಾಂಕ್
ಒಟ್ಟು ಹುದ್ದೆಗಳು: 250
ಹುದ್ದೆಗಳ ಹೆಸರು: ಲೋಕಲ್ ಬ್ಯಾಂಕ್ ಆಫೀಸರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಕೊನೆಯ ದಿನಾಂಕ: ಆಗಸ್ಟ್ 24
ಕರ್ನಾಟಕ ಸೇರಿ 4 ರಾಜ್ಯಗಳಲ್ಲಿ ನೇಮಕಾತಿ ನಡೆಯುತ್ತಿದೆ. ತಮಿಳುನಾಡಿನಲ್ಲಿ 100 ಹುದ್ದೆ ಖಾಲಿ ಇದ್ದರೆ, ಕರ್ನಾಟಕ, ಮಹಾರಾಷ್ಟ್ರ ಹಾಗೂ ಗುಜರಾತ್ ನಲ್ಲಿ ತಲಾ 50 ಹುದ್ದೆಗಳು ಖಾಲಿ ಇವೆ. ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಮಾಸಿಕ 85 ಸಾವಿರ ರೂಪಾಯಿವರೆಗೆ ವೇತನ ನೀಡಲಾಗುತ್ತದೆ. ಲಿಖಿತ ಪರೀಕ್ಷೆ, ಸ್ಥಳೀಯ ಭಾಷಾ ಸಾಮರ್ಥ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಕನಿಷ್ಠ 20 ವರ್ಷದಿಂದ ಗರಿಷ್ಠ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿಯವರಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಆಸಕ್ತಿ ಇರುವವರು www.iob.bank.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಜನರಲ್, ಒಬಿಸಿಯವರಿಗೆ 850 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿಯವರಿಗೆ 175 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಇದನ್ನೂ ಓದಿ : UPSCಯಲ್ಲಿ 34 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ



















