ಬೆಂಗಳೂರು : ಕಾವೇರಿ ಜಲ ವಿವಾದ ಸಂಬಂಧ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ನಡುವೆ ಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ಕನ್ನಡಪರ ಹೋರಾಟಗಾರು ಭೇಟಿಯಾಗಿದ್ದಾರೆ.

ಕಾವೇರಿ ನೀರನ್ನು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಬಿಡಬಾರದು ಎಂಬ ಆಗ್ರಹದ ಜೊತೆಗೆ ಮೇಕೆದಾಟು ಯೋಜನೆ ಆರಂಭ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಕರವೇ ಶಿವರಾಮೇಗೌಡ ನೇತೃತ್ವದಲ್ಲಿ ಮುಖ್ಯಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಈ ವೇಳೆ ಕನ್ನಡಪರ ಹೋರಾಟಗಾರರಾದ ಸಾರಾ ಗೋವಿಂದ್ ಮತ್ತು ಹಿರಿಯ ಹೋರಾಟಗಾರರದ ಪಾಲ ನೇತ್ರ ರವರು ಕೋಡಿಹಳ್ಳಿ ಚಂದ್ರಶೇಖರ್ ರವರು ಹಾಗೂ ಬೆಂಗಳೂರು ನಗರದ ಪದಾಧಿಕಾರಿಗಳು ಹಾಜರಿದ್ದರು.
ಬೆಂಗಳೂರಲ್ಲಿ ನೀರಸ ಪ್ರತಿಕ್ರಿಯೆ
ಕರ್ನಾಟಕ ಬಂದ್‌ಗೆ ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರಮುಖ ಕನ್ನಡ ಸಂಘಟನೆಗಳು ಹಾಗೂ ಸಾರಿಗೆ ಒಕ್ಕೂಟಗಳು ಬಂದ್‌ಗೆ ಬೆಂಬಲ ನೀಡದಿರುವುದರಿಂದ ನಗರದಲ್ಲಿ ವಾಹನ ಸಂಚಾರ ಮತ್ತು ಸಾರ್ವಜನಿಕ ಜನಜೀವನ ಎಂದಿನಂತೆ ಸಾಗುತ್ತಿದೆ. ಬಂದ್ ಹಿನ್ನೆಲೆಯಲ್ಲಿ ನಗರದಾದ್ಯಂತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಸಾರ್ವಜನಿಕರಿಗೆ ಹಾಗೂ ಆಸ್ತಿಗೆ ಯಾವುದೇ ಹಾನಿಯಾಗದಂತೆ ತಡೆಯಲು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಕೇಂದ್ರ, ಪಶ್ಚಿಮ, ವಾಯುವ್ಯ ಹಾಗೂ ಎಲೆಕ್ಟ್ರಾನಿಕ್ ಸಿಟಿ ವಿಭಾಗಗಳಲ್ಲಿ ಬಿಗಿ ಪೊಲೀಸ್ ಕಾವಲು ಹಾಕಲಾಗಿದೆ. ತಮಿಳು ಭಾಷಿಕರು ಹೆಚ್ಚಾಗಿ ವಾಸಿಸುವ ಪ್ರದೇಶಗಳು ಹಾಗೂ ಗಡಿ ಭಾಗಗಳಲ್ಲಿ ಇನ್‌ಸ್ಪೆಕ್ಟರ್‌ಗಳ ನೇತೃತ್ವದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ.
ಇದನ್ನೂ ಓದಿ : ಬಾಯಿಗೆ ಟೇಪ್ ಅಂಟಿಸ್ಕೊಂಡು ಮನೆಯಿಂದ ಹೊರ ಬರ್ತಿದ್ದಂತೆ ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ!



















