ಬೆಂಗಳೂರು : ನಗರದಲ್ಲಿ ಐದು ಕಮಿಷನರೇಟ್‌ಗಳನ್ನು ರಚಿಸುವ ವಿಚಾರಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಡಿಜಿ ಕಚೇರಿಯಿಂದ ಪೊಲೀಸ್ ಕಮಿಷನರ್‌ಗೆ ಕಳುಹಿಸಲಾಗಿದ್ದ ಮಾಹಿತಿಯನ್ನು ಸಿಬ್ಬಂದಿಯೊಬ್ಬರು ವ್ಯಕ್ತಿಯ ವಾಟ್ಸ್‌ಆ್ಯಪ್‌ಗೆ ಕಳುಹಿಸಿರುವುದು ಬೆಳಕಿಗೆ ಬಂದಿದೆ.
ಡಿಜಿ ಕಚೇರಿಯಿಂದ ಬಂದ ಮಾಹಿತಿಯನ್ನು ವ್ಯಕ್ತಿಯ ವಾಟ್ಸ್‌ಆ್ಯಪ್‌ಗೆ ಕಳುಹಿಸಿದ ಬಳಿಕ, ಅದನ್ನು ಬೇರೆ ಬೇರೆ ಮೊಬೈಲ್ ನಂಬರ್‌ಗಳಿಗೆ ರವಾನಿಸಲಾಗಿದೆ ಎನ್ನಲಾಗಿದೆ. ಈ ಮೂಲಕ ಗೌಪ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ನಾಲ್ವರು ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಅಮಾನತುಗೊಂಡವರಲ್ಲಿ ಭವ್ಯ (ಎಫ್‌ಡಿಎ), ಸುಹಾಸ್ (ಎಸ್‌ಡಿಎ), ವನಿತಾ ಕುಮಾರಿ (ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್) ಹಾಗೂ ಒಬ್ಬ ಸೂಪರಿಂಟೆಂಡೆಂಟ್ ಸೇರಿದ್ದಾರೆ. ಗೌಪ್ಯ ಮಾಹಿತಿಯನ್ನು ಅನಧಿಕೃತವಾಗಿ ಹಂಚಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ನಾಲ್ವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಜಂಟಿ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಆದೇಶ ಹೊರಡಿಸಿದ್ದಾರೆ. ಮಾಹಿತಿ ಸೋರಿಕೆಯ ಹಿಂದೆ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆಯೂ ಪರಿಶೀಲನೆ ನಡೆಯುವ ಸಾಧ್ಯತೆಯಿದೆ.
ಇದನ್ನೂ ಓದಿ : ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!


















